ಬೆಂಗಳೂರಿಗೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಆಗಮನ

ಬೆಂಗಳೂರು : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಇಂದು ಬೆಳಗಿನ ಜಾವ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು.
ಅವರು ಇಂದು ನಗರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಗೃಹಮಂತ್ರಿಯನ್ನು ರಾಜ್ಯದ ಸಚಿವರುಗಳಾದ ಗೋವಿಂದ ಕಾರಜೋಳ, ಅರಗ ಜ್ಞಾನೇಂದ್ರ, ಡಾ.ಅಶ್ವತ್ ನಾರಾಯಣ್, ವಿ ಸೋಮಣ್ಣ, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಕೇಂದ್ರ ಗೃಹ ಸಚಿವರು ಇಂದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಧ್ಯಾಹ್ನದ ನಂತರ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Next Story





