ಕನ್ನಡದ ಹಾಸ್ಯ ನಟ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮದಲ್ಲಿ ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಟೆನ್ನಿಸ್ ಕೃಷ್ಣರನ್ನು ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.
'ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಡಳಿತ ಮೆಚ್ಚಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರದೇ ಸೇವೆಗಾಗಿ ಪಕ್ಷಕ್ಕೆ ಸೇರಿದ್ದೇನೆ' ಎಂದು ಟೆನ್ನಿಸ್ ಕೃಷ್ಣ ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಮೋಹನ್ ದಾಸರಿ, ಜಗದೀಶ್ ಸದಂ ಇತರರಿದ್ದರು.

Next Story





