ಪ್ರಚಾರದ ಹುಚ್ಚಿಗಾಗಿ ಕಳಪೆ, ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ ಬಿಜೆಪಿ: ಕಾಂಗ್ರೆಸ್

ಬೆಂಗಳೂರು: ಭಾರತೀಯ ಧ್ವಜ ಸಂಹಿತೆಯನ್ನು ಉಲ್ಲಂಘಿಸಿ ವಿರೂಪಗೊಳಿಸಿ ಬಿಜೆಪಿ ತನ್ನ ಕರ್ನಾಟಕದ ಕೇಂದ್ರ ಕಚೇರಿಯಲ್ಲಿ ಮಾರಾಟ ಮಾಡುತ್ತಿದೆ ಎಂಬ ವರದಿಯನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಆರೆಸ್ಸೆಸ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, 'ಒಳಗಡೆ ತಿರಂಗಾ ದ್ವೇಷವನ್ನಿಟ್ಟುಕೊಂಡು ಹೊರಗಡೆ ನಾಟಕ ಮಾಡಿದರೆ ಇಂತವೇ ಸಂಭವಿಸುತ್ತವೆ' ಎಂದು ಕಿಡಿಗಾರಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ''RSS & ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ. ರಾಜ್ಯ ಬಿಜೆಪಿ ಪ್ರಚಾರದ ಹುಚ್ಚಿಗಾಗಿ ಕಳಪೆ & ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ ಮಾಡಿದರೆ ಇಂತವೇ ಸಂಭವಿಸುತ್ತವೆ'' ಎಂದು ಹೇಳಿದೆ.
ಇದನ್ನೂ ಓದಿ: ಸರಿಯಾಗಿ ಹೊಲಿಯದ ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡಿದ ರಾಜ್ಯ ಬಿಜೆಪಿ ಕಚೇರಿ
'ಬಿಜೆಪಿ ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ತಮ್ಮ ನಕಲಿ ನಾಟಕ ಮುಂದುವರೆಸಲಿ. ಬಿಜೆಪಿಗೆ ನಿಜವಾಗಿಯೂ ತಿರಂಗಾಪ್ರೇಮ ಇದ್ದರೆ ಭಗವಾಧ್ವಜವನ್ನೇ ರಾಷ್ಟ್ರಧ್ವಜವನ್ನಾಗಿ ಬದಲಿಸುತ್ತವೆ ಎಂದ ಶಾಸಕರಾದ ಈಶ್ವರಪ್ಪ, ಹರೀಶ್ ಪೂಂಜಾರ ಮೇಲೆ ಯಾವ ಕ್ರಮ ಕೈಗೊಂಡಿದೆ ಹೇಳಲಿ' ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
'@BJP4Karnataka ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ತಮ್ಮ ನಕಲಿ ನಾಟಕ ಮುಂದುವರೆಸಲಿ.
— Karnataka Congress (@INCKarnataka) August 4, 2022
ಬಿಜೆಪಿಗೆ ನಿಜವಾಗಿಯೂ ತಿರಂಗಾಪ್ರೇಮ ಇದ್ದರೆ
ಭಗವಾಧ್ವಜವನ್ನೇ ರಾಷ್ಟ್ರಧ್ವಜವನ್ನಾಗಿ ಬದಲಿಸುತ್ತವೆ ಎಂದ ಶಾಸಕರಾದ ಈಶ್ವರಪ್ಪ, ಹರೀಶ್ ಪೂಂಜಾರ ಮೇಲೆ ಯಾವ ಕ್ರಮ ಕೈಗೊಂಡಿದೆ ಹೇಳಲಿ.







