ಮಂಗಳೂರು; ಆ. 8ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಕಮಿಷನರ್ ಶಶಿಕುಮಾರ್
ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ದ್ವಿಚಕ್ರದಲ್ಲಿ ಪುರುಷ ಸಹಸವಾರರಿಗೆ ನಿರ್ಬಂಧ

ಕಮಿಷನರ್ ಶಶಿಕುಮಾರ್
ಮಂಗಳೂರು, ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ.
ಇದೇ ವೇಳೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮಾದರಿಯ ದ್ವಿಚಕ್ರ ವಾಹನದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯರು, ಮಹಿಳೆಯರು, 18 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಯುವಕರು ಹಾಗೂ ಪುರುಷ ಸಹ ಸವಾರರ ಓಡಾಟವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
Next Story