Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಆಳ್ಶಿರೆಡ್ಡೆ’ ಕೊಂಕಣಿ ಚಿತ್ರದ ಪೋಸ್ಟರ್...

‘ಆಳ್ಶಿರೆಡ್ಡೆ’ ಕೊಂಕಣಿ ಚಿತ್ರದ ಪೋಸ್ಟರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ4 Aug 2022 5:02 PM IST
share
‘ಆಳ್ಶಿರೆಡ್ಡೆ’ ಕೊಂಕಣಿ ಚಿತ್ರದ ಪೋಸ್ಟರ್ ಬಿಡುಗಡೆ

ಮಂಗಳೂರು, ಆ.4: ಸ್ಪಾರ್ಕಲ್ ಪ್ರೊಡಕ್ಷನ್ ನಿರ್ಮಾಣದ ಹಾಗೂ ಆರ್‌ಆರ್ ಫಿಲ್ಮ್  ಇಂಟರ್ನ್ಯಾಷನಲ್ ಮತ್ತು ಯುಯನ್ನ್ ಸಿನಿಮಾಸ್ ಸಹಯೋಗದಲ್ಲಿ ನೂತನ ಕೊಂಕಣಿ ಚಲನಚಿತ್ರ ತೆರೆಗೆ ಸಿದ್ಧವಾಗಿದೆ ಎಂದು ಚಿತ್ರದ ನಿರ್ದೇಶಕ,  ನಟ ಗೋಡ್ವಿನ್ ಸ್ಪಾರ್ಕಲ್  ತಿಳಿಸಿದರು.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಚಿತ್ರದ ಚಿತ್ರೀಕರಣ ಎಡಪದವು, ಮಂಗಳೂರು, ಉಡುಪಿ ಹಾಗೂ ಬೆಂಗಳೂರಿನಲ್ಲಿ  ಮಾಡಲಾಗಿದೆ. ಈ ಚಿತ್ರವು ಆಗಸ್ಟ್  ಕೊನೆಯ ವಾರದಲ್ಲಿ ಬಿಡುಗಡೆಗೊಳ್ಳಲಿದೆ ಎಂದರು.

ಹಾರರ್ ಕಾಮಿಡಿ ಮತ್ತು ಹಾಸ್ಯಭರಿತ ಚಿತ್ರ ಇದಾಗಿದ್ದು, ಇದರ ನಿರ್ದೇಶನವನ್ನು ಗೋಡ್ವಿನ್ ಸ್ಪಾರ್ಕಲ್ ಮತ್ತು  ಹೆರ ಪಿಂಟೋ ಮಾಡಿದ್ದಾರೆ. ಸಹಾಯಕ ನಿರ್ದೇಶಕರಾಗಿ ಯತೀಶ್ ಪೂಜಾರಿ ಹಾಗೂ ರಾಯನ್ ಮ್ಯಾಗ್ನೆಟೊ ಸಹಕರಿಸಿದ್ದಾರೆ ಎಂದವರು ತಿಳಿಸಿದರು.

ಚಿತ್ರದ ಮುಖ್ಯ ಭೂಮಿಕೆಯಲ್ಲಿ ಗೋಡ್ವಿನ್ ಸ್ಪಾರ್ಕಲ್, ಹೆರ ಪಿಂಟೋ ನಟಿಸಿದ್ದು  ದೀಪಕ್ ರೈ ಪಾಣಾಜೆ, ವಿಲಿಯಂ ಪಿಂಟೋ ಪದರೆಂಗಿ, ಮರ್ವಿನ್ ಶಿರ್ವಾ, ಸಂದೀಪ್ ಮಲಾನಿ, ರಿಚರ್ಡ, ಹೆನ್ಲಿ ವಿಶಾಲ್, ಶರಣ್ ಶೆಟ್ಟಿ, ಸಂಪತ್ ಲೋಬೋ, ಸುಮನಾ, ರಾಯನ್ ಮ್ಯಾಗ್ನಿಟೋ, ಇಶಾಂತ್, ಮಹೇಶ್, ಪ್ರಣೀತಾ ಹಾಗು ಇತರ ಕಲಾವಿದರು ಈ ಚಿತ್ರದಲ್ಲಿ ವಿವಿಧ ಪಾತ್ರ ನಿಭಾಯಿಸಿದ್ದಾರೆ. ಪ್ಯಾಟ್ಸನ್ ಪಿರೇರಾ ಸಂಗೀತ ನಿರ್ದೇಶನ ಮಾಡಿದ್ದು, ವಿಲಿಯಂ ಪಿಂಟೋ ಪದರೆಂಗಿರವರ ಸಂಭಾಷಣೆ ಇದ್ದು ಸ್ಪಾರ್ಕಲ್ ಪ್ರೊಡಕ್ಷನ್ ತಂತ್ರಜ್ಞರು ಹಾಗೂ ಪ್ರಜ್ವಲ್ ಸುವರ್ಣ  ಮತ್ತು ಇರ್ಶನ್ ಅಲಿ ಛಾಯಾಗ್ರಹಣ ಮಾಡಿದ್ದಾರೆ. ಮೆಲ್ವಿನ್ ಮತ್ತು  ಕೃತಿಕ್ ರಾಜ್ ಭಟ್ ಸಹಾಯಕ ಛಾಯಾಗ್ರಹಣ ಜವಾಬ್ದಾರಿ ನಿರ್ವಹಿಸಿದ್ದಾರೆ. ಬಾಲಿವುಡ್ ಗಾಯಕರಾದ ಕುನಾಲ್ ಗಾಂಜಾವಾಲ, ಮೋಹಿತ್ ಚೌಹಾನ್ ಮತ್ತು ಲವೀಟ ಲೋಬೊ ಹಾಡಿದ್ದಾರೆ. ಸಾಹಿತ್ಯವನ್ನು ವಿಲ್ಸನ್ ಕಟೀಲ್  ಬರೆದಿದ್ದಾರೆ.

ಜೇಸನ್ ಡಿಸೋಜಾ, ಮರ್ವಿನ್ ಸ್ಪಾರ್ಕಲ್, ಶಾನ್ ಡಿಸೋಜಾ ಮತ್ತು ಸುಶನ್ ರೈ ಮಾವಿನಕಟ್ಟೆ ನಿರ್ಮಾಣ ವ್ಯವಸ್ಥಾಪಕರಾಗಿ ಕೆಲಸ ಮಾಡಿದ್ದಾರೆ. ಸಂಕಲನವನ್ನು ರಾಹುಲ್ ವಶಿಷ್ಠ ಮತ್ತು ಪ್ರತೀಶ್ ಕಾಪು ಮಾಡಿದ್ದಾರೆ. ಹಿನ್ನಲೆ ಸಂಗೀತ ಪ್ರಜೋತ್ ಡೇಸಾ ಮತ್ತು ಎಸ್‌ಎಫ್‌ಎಕ್ಸ್ ಲೊಯ್ ವ್ಯಾಲೆಂಟೈನ್ ನೀಡಿರುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮರ್ವಿನ್ ಶಿರ್ವಾ, ಜೇಸನ್ ಡಿ ಸೋಜಾ , ಪ್ರತೀಶ್ ಕಾಪು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X