ಮಂಗಳೂರು: ಜನನ ಮತ್ತು ಮರಣ ನೋಂದಣಿ ಕಾಯ್ದೆಯಲ್ಲಿ ಜಾರಿಗೆ ತಂದಿರುವ ತಿದ್ದುಪಡಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರು ಗುರುವಾರ ಪ್ರತಿಭಟನೆ ನಡೆಸಿದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪ್ರಥ್ವಿರಾಜ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.