ಆರ್ಥಿಕ, ಶಾಸನಾತ್ಮಕ ತೀರ್ಮಾನ ತೆಗೆದುಕೊಳ್ಳದಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಆ.4: ಸಂಘದ ಬೈಲಾ ಪ್ರಕಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆದಿಲ್ಲ ಎಂಬ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ಯಾವುದೇ ಆರ್ಥಿಕ ಹಾಗೂ ಶಾಸನಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ದೇಶನ ನೀಡಿದೆ.
ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಇನ್ನಿತರೆ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆ ಪಾರದರ್ಶಕವಾಗಿಲ್ಲ ಎಂದು ಅಧ್ಯಕ್ಷ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಸಾ.ರಾ ಗೋವಿಂದು ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.
ಜೂ.28ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗಳನ್ನು ಸಂರಕ್ಷಿಸಿಡಬೇಕು. ವಿಡಿಯೋ, ಸಿಸಿಟಿವಿ ದೃಶ್ಯಗಳು, ಚುನಾವಣೆ ಬ್ಯಾಲೆಟ್ ಪೇಪರ್ ಹೀಗೆ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ದಾಖಲೆ, ಮಾಹಿತಿಗಳನ್ನು ಸಂರಕ್ಷಿಸಿಡಲು ನ್ಯಾಯಪೀಠವು ಆದೇಶಿಸಿದೆ.
Next Story





