ಆ.9: ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ರಾಜ್ಯಪಾಲರಿಂದ ಸನ್ಮಾನ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಆ.5: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ.
ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆ.9ರಂದು ಬೆಳಗ್ಗೆ 10:30ಕ್ಕೆ ನಗರದ ಮಲ್ಲೇಶ್ವರಂ ಬಡಾವಣೆಯಲ್ಲಿರುವ ವಿ. ನಾಗಭೂಷಣ ರಾವ್ ಮನೆಗೆ ತೆರಳಿ ರಾಜ್ಯಪಾಲರು ಸನ್ಮಾನಿಸಿ ಗೌರವ ಅರ್ಪಿಸಲಿದ್ದಾರೆ. ಅದೇ ದಿನ ಪೂರ್ವಾಹ್ನ 11 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್. ನಾರಾಯಣಪ್ಪರ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ.
ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





