ಹಾವೇರಿಯಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ

ಸಾಂದರ್ಭಿಕ ಚಿತ್ರ
ಉಡುಪಿ, ಆ.5: ಭಾರತೀಯ ಸೇನೆಗೆ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ಸೆಪ್ಟಂಬರ್ 1ರಿಂದ 20ರವರೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿದೆ.
ಈ ನೇಮಕಾತಿ ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹು ದಾಗಿದೆ. ಹೆಚ್ಚಿನ ಮಾಹಿತಿಗೆ ಸೇನೆಯ ವೆಬ್ಸೈಟ್ -www.joinindianarmy.nic.in- ಅನ್ನು ಸಂಪರ್ಕಿಸಬ ಹುದು ಎಂದು ಪ್ರಕಟಣೆ ತಿಳಿಸಿದೆ.
Next Story





