Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕ್ಷಣಿಕ ಸುಖ ನೀಡುವ ದುಶ್ಚಟಗಳಿಗೆ...

ಕ್ಷಣಿಕ ಸುಖ ನೀಡುವ ದುಶ್ಚಟಗಳಿಗೆ ಬಲಿಯಾಗಬೇಡಿ: ಎಡಿಸಿ ಕರೆ

ವಾರ್ತಾಭಾರತಿವಾರ್ತಾಭಾರತಿ5 Aug 2022 10:07 PM IST
share
ಕ್ಷಣಿಕ ಸುಖ ನೀಡುವ ದುಶ್ಚಟಗಳಿಗೆ ಬಲಿಯಾಗಬೇಡಿ: ಎಡಿಸಿ ಕರೆ

ಉಡುಪಿ, ಆ.5: ದುಶ್ಚಟಗಳು  ಮನುಷ್ಯನಿಗೆ ತಾತ್ಕಾಲಿ ಸುಖ ನೀಡಿದರೂ, ನಂತರದಲ್ಲಿ  ಅವನ ಅಮೂಲ್ಯವಾದ ಸಮಯ, ಆರೋಗ್ಯ, ಗೌರವವನ್ನು ಹಾಳು ಮಾಡುವುದರ ಜೊತೆಗೆ ಆರ್ಥಿಕ ನಷ್ಟಕ್ಕೂ ಕಾರಣವಾಗುತ್ತದೆ. ಆದ್ದರಿಂದ ಯುವಜನರು ದುಶ್ಚಟಗಳಿಂದ ದೂರ ಇರುವುದು ಒಳ್ಳೆ ಯದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. 

ಶುಕ್ರವಾರ ಮಣಿಪಾಲದ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ ಕಾಲೇಜು ಮಣಿಪಾಲ ಹಾಗೂ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಡಾ.ಮಹಾಂತೇಶ ಶಿವಯೋಗಿಗಳ ಜನ್ಮದಿನದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕ್ಷಣಿಕ ಸುಖಕ್ಕಾಗಿ ಜನರು ವ್ಯಸನಕ್ಕೆ ದಾಸರಾಗುವುದರೊಂದಿಗೆ, ದುಶ್ಚಟಗಳ ಚಕ್ರವ್ಯೆಹದಲ್ಲಿ ಸಿಲುಕಿದರೆ ಅದರಿಂದ  ಹೊರಬರುವುದು ಕಷ್ಠಸಾಧ್ಯ. ಯುವ ಜನರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಉತ್ತಮ ಶಿಕ್ಷಣ ಹೊಂದಿ, ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಸದೃಡ ಭಾರತ ನಿರ್ಮಾಣಕ್ಕೆ  ಮುಂದಾಗಬೇಕು ಎಂದವರು ಹೇಳಿದರು. 

ಸರಕಾರ, ಆರೋಗ್ಯವಂತ ಸಮಾಜ ಹೊಂದಬೇಕು ಎಂಬ ಆಶೋತ್ತರ ಗಳೊಂದಿಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು  ಮಾಡುತ್ತಿದೆ. ಡಾ. ಮಹಾಂತೇಶ ಶಿವಯೋಗಿ ಸ್ವಾಮೀಜಿ ಯವರು  20-21ನೇ ಶತಮಾನದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮ ಜೋಳಿಗೆಯಲ್ಲಿ ದುಶ್ಚಟಗಳ ಭಿಕ್ಷೆಯನ್ನು ಬೇಡಿ ಪರಿವರ್ತನೆಗೆ ಮುಂದಾಗಿದ್ದರ ಹಿನ್ನೆಲೆಯಲ್ಲಿ ಅವರ ಜನ್ಮದಿನಾಚರಣೆಯನ್ನು  ವ್ಯಸನ ಮುಕ್ತ ದಿನವನ್ನಾಗಿ ಆಚರಿಸುತ್ತಿದೆ ಎಂದರು.

ಖ್ಯಾತ ಮನೋವೈದ್ಯ ಡಾ. ಪಿ.. ಭಂಡಾರಿ ಮಾತನಾಡಿ, ಸಾಮಾನ್ಯವಾಗಿ ವಿದ್ಯಾರ್ಥಿ ಜೀವನದಲ್ಲಿ ಯುವಜನರು ತಮ್ಮ ಸ್ನೇಹಿತರ ಸಹವಾಸ ಹಾಗೂ ಪ್ರಚೋದನೆಯಿಂದ ಕೆಟ್ಟ ಚಟಗಳನ್ನು ಕಲಿಯುತ್ತಾರೆ. ಇಂತಹ ಹವ್ಯಾಸಗಳಿಂದ  ಆರೋಗ್ಯದ  ಮೇಲೆ ದುಷ್ಪರಿಣಾಮ ಉಂಟಾಗಿ, ವಿದ್ಯಾರ್ಥಿಗಳ  ಓದು ಕುಂಠಿತಗೊಳ್ಳುವ ಜೊತೆಗೆ ಅವರ  ಭವಿಷ್ಯವನ್ನು ಕತ್ತಲೆಗೆ ತಳ್ಳುತ್ತದೆ. ಇಂತಹ ವ್ಯಸನಗಳಿಗೆ ಯುವಜನತೆ ಬಲಿಯಾಗದೇ ದೂರವಿರಬೇಕು ಎಂದರು. 

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ, ಡಾ.ಮಹಾಂತೇಶ ಶಿವಯೋಗಿಗಳ ಹಿನ್ನೆಲೆ ಹಾಗೂ ಸಮಾಜದಲ್ಲಿ ಅವರು ಜಾರಿಗೆ ತಂದ ಸುಧಾರಣೆ ಮತ್ತು ಅವರಿಗಿದ್ದ ಸಾಮಾಜಿಕ ಕಳಕಳಿಯ ಬಗ್ಗೆ ತಿಳಿಸಿದರು.

ಕಾಲೇಜಿನ ಉಪಪ್ರಾಂಶುಪಾಲ ಡೇರಿಕ್ ಮಸ್ಕರೇನಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಪ್ರಾಂಶುಪಾಲ ನರೇಂದ್ರ ಪೈ, ಕಾಲೇಜಿನ ಶೈಕ್ಷಣಿಕ ಸಂಯೋಜಕ ಟಿ.ರಂಗ ಪೈ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು. ವಿದ್ಯಾರ್ಥಿನಿ ಪ್ರಿಯಾಂಕ ನಿರೂಪಿಸಿ, ಸತ್ಯವ್ರತಾ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X