ಬೆಲೆ ಏರಿಕೆ ವಿರುದ್ಧ ಕಪ್ಪು ಕುರ್ತಾ, ಪೇಟ ಧರಿಸಿ ಮಲ್ಲಿಕಾರ್ಜುನ ಖರ್ಗೆ ಪ್ರತಿಭಟನೆ

ಹೊಸದಿಲ್ಲಿ, ಆ. 5: ಬೆಲೆ ಏರಿಕೆ ಹಾಗೂ ನಿರುದ್ಯೋಗದ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪು ಕುರ್ತಾ ಹಾಗೂ ಮುಂಡಾಸು ಧರಿಸಿ ಸಂಸತ್ತಿನಲ್ಲಿ ಶುಕ್ರವಾರ ಪ್ರತಿಭಟನೆ ವ್ಯಕ್ತಪಡಿಸಿದರು.
ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಶುಕ್ರವಾರ ರಾಷ್ಟ್ರಪತಿ ಭವನಕ್ಕೆ ಜಾಥಾ ನಡೆಸಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಘೆರಾವೋ ಹಾಕಿತು.
ಬೆಲೆ ಹಾಗೂ ಜಿಎಸ್ಟಿ ಏರಿಕೆ ವಿರುದ್ಧ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಸಂಸತ್ತಿನಲ್ಲಿ ಈ ವಿಷಯಗಳ ಕುರಿತು ಚರ್ಚೆ ನಡೆಸುವಂತೆ ಅದು ಆಗ್ರಹಿಸಿದೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆ ಒಳಪಡಿಸಿತ್ತು.
Next Story