Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ...

ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ಸಚಿವ ನಿರಾಣಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ6 Aug 2022 8:54 PM IST
share
ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ಸಚಿವ ನಿರಾಣಿ ಆಹ್ವಾನ

ಟೋಕಿಯೋ, ಆ.6: ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ್ ನಿರಾಣಿ, ಜಪಾನ್‍ಗೆ ಭೇಟಿ ನೀಡಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಲು ಸಚಿವ ಮುರುಗೇಶ್ ನಿರಾಣಿ ನೇತೃತ್ವದ ನಿಯೋಗ ಜಪಾನ್ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಟೋಕಿಯೋ ಕನ್ನಡ ಬಳಗ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಹ್ವಾನ ನೀಡಿದರು.

`ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ, ಜಪಾನ್‍ಗೆ ಸಂಬಂಧಿಸಿದಂತೆ, ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್ ಕೈಗಾರಿಕಾ ಟೌನ್‍ಶಿಪ್ ಸ್ಥಾಪಿಸಲಾಗಿದೆ. ಅದಕ್ಕಾಗಿ 519.55 ಎಕರೆ ಭೂಮಿ ಮೀಸಲಿಡಲಾಗಿದ್ದು, ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸಲಾಗುವುದು’ ಎಂದು ನಿರಾಣಿ  ಭರವಸೆ ನೀಡಿದರು.

ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರಕಾರ ಉತ್ತೇಜಿಸುತ್ತದೆ. ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ವಿದೇಶಿ ನೇರ ಹೂಡಿಕೆಯಲ್ಲಿ ನಮ್ಮ ರಾಜ್ಯದ ಪಾಲು ಶೇ.38 ಎಂದು ಅವರು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಒಡ್ಡುವ ಮಟ್ಟಕ್ಕೇರಿದೆ. ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಳೆದ 3-4 ತಿಂಗಳಿಂದೀಚೆಗೆ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದು ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಟೋಕಿಯೊ ಕನ್ನಡ ಬಳಗದ ಗಣೇಶ್ ಕೃಷ್ಣಯ್ಯ, ಟೋಕಿಯೋ ಕನ್ನಡ ಬಳಗದಲ್ಲಿ 1000ಕ್ಕೂಹೆಚ್ಚು ಸದಸ್ಯರಿದ್ದು, ಜಪಾನಿನ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಿಣಿಸಿ ಹಲವು ಕನ್ನಡಿಗರು ಇಲ್ಲಿನ ಸರಕಾರದ ಗೌರವಕ್ಕೆ ಪಾತ್ರರಾಗಿದ್ದಾರೆ. ಕನ್ನಡ ಬಳಗ ಆಯೋಜಿಸುವ ಯುಗಾದಿ ಉತ್ಸವದಲ್ಲಿ ಜಪಾನ್ ನಾಗರಿಕರು ಪಾಲ್ಗೊಂಡು ಸಂಭ್ರಮಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಮಯಾಂಕ್ ಜೋಶಿ ಮತ್ತು ಭಾರತೀಯ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಮನೋಜ್ ಸಿಂಗ್ ನೇಗಿ ಹಾಗೂ ಕನ್ನಡ ಬಳಗದ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X