Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ...

ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ: ಬಿಬಿಎಂಪಿ ಆದೇಶ

ವಾರ್ತಾಭಾರತಿವಾರ್ತಾಭಾರತಿ6 Aug 2022 10:21 PM IST
share
ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ: ಬಿಬಿಎಂಪಿ ಆದೇಶ

ಬೆಂಗಳೂರು, ಆ.6: ನಗರದ ಚಾಮರಾಜಪೇಟೆಯ ಸರ್ವೇ ನಂಬರ್ 40ರಲ್ಲಿ 2 ಎಕರೆ 5 ಗುಂಟೆ ಈದ್ಗಾ ಮೈದಾನವು ‘ಕಂದಾಯ ಇಲಾಖೆಗೆ’ ಸೇರಿದೆ ಎಂದು ಘೋಷಿಸಿ ಬಿಬಿಎಂಪಿಯ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಶನಿವಾರ ಆದೇಶ ಹೊರಡಿಸಿದ್ದಾರೆ.

ಇತ್ತೀಚಿಗೆ ಈದ್ಗಾ ಮೈದಾನದ ಮಾಲಕತ್ವದ ಕುರಿತು ವಿವಾದವನ್ನು ಸೃಷ್ಟಿಸಲಾಗಿತ್ತು. ಬಿಬಿಎಂಪಿ ತನ್ನ ದಾಖಲೆಗಳಲ್ಲಿ ಆಟದ ಮೈದಾನ ಎಂದು ದಾಖಲಾಗಿದೆ ಎಂದು ತಿಳಿಸಿತ್ತು. ವಕ್ಫ್ ಬೋರ್ಡ್ ಈದ್ಗಾ ಮೈದಾನ ವಕ್ಫ್ ಬೋರ್ಡ್‍ಗೆ ಸೇರಿದೆ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಬಿಬಿಎಂಪಿಗೆ ನೀಡಿತ್ತು. ಆದರೆ ಬಿಬಿಎಂಪಿ ವಕ್ಫ್ ಬೋರ್ಡ್ ಹೆಸರಿಗೆ ಖಾತೆಯನ್ನು ಮಾಡಲು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಎರಡು ಬಾರಿ ವಕ್ಫ್ ಬೋರ್ಡ್‍ಗೆ ನೋಟೀಸ್ ನೀಡಿತ್ತು. ಆದರೆ ವಕ್ಫ್ ಬೋರ್ಡ್ ನ್ಯಾಯಾಲಯದ ಆದೇಶವನ್ನು ಹೊರತು ಪಡಿಸಿ, ಈದ್ಗಾ ಮೈದಾನ ವಕ್ಫ್ ಆಸ್ತಿ ಎಂಬುದನ್ನು ಪುಷ್ಟಿಕರಿಸುವಂತಹ ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ಹಾಗಾಗಿ ವಿಚಾರಣೆಯ ಬಳಿಕ ಆಸ್ತಿಯನ್ನು ಕರ್ನಾಟಕ ರಾಜ್ಯ ಸರಕಾರದ ಕಂದಾಯ ಇಲಾಖೆ ಎಂದು ನಮೂದಿಸಲಾಗಿದೆ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.

ಸಂಘ ಪರಿಪರಿವಾರ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಚಾಮರಾಜ ಬಂದ್‍ಗೆ ಗಣೇಶೋತ್ಸವ, ಸ್ವಾತಂತ್ರ್ಯ ದಿನಾಚಾರಣೆ, ಗಣರಾಜ್ಯೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚಾರಣೆಗೆ ಅನುಮತಿ ಕೊಡಬೇಕು ಎಂದು ಪಟ್ಟು ಹಿಡಿದಿದ್ದವು. ಅಲ್ಲದೆ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿಯೇ ಉಳಿಸಿಕೊಳ್ಳಲು ಬಿಬಿಎಂಪಿ ಸೇರಿ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದವು. ಇದರಂದ ನಗರದಲ್ಲಿ ಈದ್ಗಾ ಮೈದಾನವು ವಿವಾದದ ಕೆಂದ್ರ ಬಿಂದುವಾಗಿತ್ತು.  

ಬಿಬಿಎಂಪಿ ಆದೇಶಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ. ಈಗ ಬಿಬಿಎಂಪಿ ಅದು ಕಂದಾಯ ಇಲಾಖೆಯ ಆಸ್ತಿ ಎಂದು ತಿಳಿಸಿರುವುದರಿಂದ, ಕಂದಾಯ ಇಲಾಖೆ ಜೊತೆ ಯಾವ ರೀತಿ ವ್ಯವಹರಿಸಬೇಕು ಎಂಬುದರ ಕುರಿತು ಮುಂದಿನ ಹೆಜ್ಜೆಗಳನ್ನು ಇಡುತ್ತೇವೆ.

ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ​ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X