Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರ್ಷಗಳಿಂದಲೂ ಪತಿಯಿಂದ ಥಳಿಸಲ್ಪಟ್ಟಿದ್ದ...

ವರ್ಷಗಳಿಂದಲೂ ಪತಿಯಿಂದ ಥಳಿಸಲ್ಪಟ್ಟಿದ್ದ ಭಾರತೀಯ ಮಹಿಳೆಯ ಆತ್ಮಹತ್ಯೆ: ಅಮೆರಿಕದಲ್ಲಿ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 Aug 2022 10:30 PM IST
share
ವರ್ಷಗಳಿಂದಲೂ ಪತಿಯಿಂದ ಥಳಿಸಲ್ಪಟ್ಟಿದ್ದ ಭಾರತೀಯ ಮಹಿಳೆಯ ಆತ್ಮಹತ್ಯೆ: ಅಮೆರಿಕದಲ್ಲಿ ತೀವ್ರ ಆಕ್ರೋಶ

ಹೊಸದಿಲ್ಲಿ,ಆ.6: ಪುತ್ರಿಯರಿಗೆ ಮಾತ್ರ ಜನ್ಮ ನೀಡಿದ್ದಕ್ಕಾಗಿ ವರ್ಷಗಳಿಂದಲೂ ಪತಿ ನೀಡುತ್ತಿದ್ದ ಹಿಂಸೆಯಿಂದ ಬೇಸತ್ತಿದ್ದ ಭಾರತೀಯ ಮೂಲದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಮುನ್ನ ಆಕೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದ ವೀಡಿಯೊ ವೈರಲ್ ಆಗಿದ್ದು,ಅಮೆರಿಕದಲ್ಲಿ ತೀವ್ರ ಆಕ್ರೋಶವನ್ನು ಸೃಷ್ಟಿಸಿದೆ.

ಹರೆಯದ ಮಂದೀಪ್ ಕೌರ್ ವರ್ಷಗಳಿಂದ ಪ್ರತಿದಿನವೂ ಪತಿಯಿಂದ ಥಳಿತಗಳನ್ನು ತಾಳಲಾಗದೇ ನ್ಯೂಯಾರ್ಕ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕೌರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಮೇಲಿನ ಕೌಟುಂಬಿಕ ಹಿಂಸಾಚಾರವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

‌

ವರ್ಷಗಳಿಂದಲೂ ನಿಂದನೆ ಮತ್ತು ಹಿಂಸೆಯನ್ನು ಸಹಿಸಿಕೊಂಡಿದ್ದೆ,ಆದರೆ ಇನ್ನು ಮುಂದೆ ಅದು ತನ್ನಿಂದ ಸಾಧ್ಯವಿಲ್ಲ ಎಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದ ಕೌರ್ ವೀಡಿಯೊದಲ್ಲಿ ಹೇಳಿದ್ದಾರೆ. ಅವರ ಪತಿ ರಣಜೋಧಬೀರ್ ಸಿಂಗ್ ಸಂಧು ಟ್ರಕ್ ಚಾಲಕನಾಗಿದ್ದಾನೆ.

‘ನಾನು ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದೇನೆ. ನಾನು ನನ್ನಿಂದ ಸಾಧ್ಯವಾದಷ್ಟು ಸಹಿಸಿಕೊಂಡಿದ್ದೆ,ಅದರೆ ದಿನವೂ ಹೊಡೆತಗಳನ್ನು ಸಹಿಸಲು ಇನ್ನು ಸಾಧ್ಯವಾಗುತ್ತಿಲ್ಲ. ಒಂದಲ್ಲೊಂದು ದಿನ ಆತ ಬದಲಾಗುತ್ತಾನೆ ಎಂಬ ಆಸೆಯಿಂದ ಎಂಟು ವರ್ಷಗಳಿಂದಲೂ ಆತ ನೀಡುತ್ತಿದ್ದ ಹಿಂಸೆಯನ್ನು ಸಹಿಸಿಕೊಂಡಿದ್ದೆ’ ಎಂದು ಕೌರ್ ವೀಡಿಯೊದಲ್ಲಿ ಹೇಳಿದ್ದಾರೆ. ಕೌರ್ ನಾಲ್ಕು ಮತ್ತು ಎರಡರ ಹರೆಯದ ಇಬ್ಬರು ಪುತ್ರಿಯರನ್ನು ಬಿಟ್ಟು ಮರಳದ ಲೋಕಕ್ಕೆ ತೆರಳಿದ್ದಾರೆ.

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ನಿವಾಸಿಗಳಾದ ಸಂಧು ಮತ್ತು ಕೌರ್ 2015ರಲ್ಲಿ ಮದುವೆಯಾದ ಬಳಿಕ ಅಮೆರಿಕಕ್ಕೆ ವಲಸೆ ಹೋಗಿದ್ದರು.

ವೀಡಿಯೊದಲ್ಲಿ ಪಂಜಾಬಿಯಲ್ಲಿ ಮಾತನಾಡಿರುವ ಕೌರ್,ತಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪತಿ,ಅತ್ತೆ ಮತ್ತು ಮಾವ ಬಲಾತ್ಕರಿಸುತ್ತಿದ್ದಾರೆ. ತಾನು ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ ಪತಿ ತನ್ನನ್ನು ದ್ವೇಷಿಸುತ್ತಿದ್ದ ಎಂದು ನೋವು ತೋಡಿಕೊಂಡಿದ್ದಾರೆ. ‘ಅಪ್ಪಾ,ನಾನು ಸಾಯುತ್ತಿದ್ದೇನೆ.ದಯವಿಟ್ಟು ನನ್ನನ್ನು ಕ್ಷಮಿಸಿ ’ಎಂದು ಕೌರ್ ವೀಡಿಯೊದಲ್ಲಿ ತಂದೆ ಜಸ್ಪಾಲ್ ಸಿಂಗ್ರನ್ನು ಕೋರಿಕೊಂಡಿದ್ದಾರೆ.

ಸಿಂಗ್ ಉತ್ತರ ಪ್ರದೇಶ ಪೊಲೀಸರಲ್ಲಿ ಸಂಧು ವಿರುದ್ಧ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ನ್ಯೂಯಾರ್ಕ್ನಲ್ಲಿ ತನ್ನ ಬಂಧುಗಳು ಪೊಲೀಸ್ ಪ್ರಕರಣವನ್ನು ಅನುಸರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ‘ನಮ್ಮ ಮೊಮ್ಮಕ್ಕಳ ಸುರಕ್ಷತೆಯನ್ನು ನಾವೀಗ ಬಯಸುತ್ತಿದ್ದೇವೆ. ಅವರಿನ್ನೂ ತಮ್ಮ ತಂದೆಯ ಬಳಿಯಲ್ಲಿದ್ದಾರೆ ’ಎಂದರು.

ತಮ್ಮ ಪುತ್ರಿಯ ಶೋಷಣೆ ಒಂದಲ್ಲೊಂದು ದಿನ ನಿಲ್ಲುತ್ತದೆ ಎಂದು ಆಶಿಸಿದ್ದೆವು ಎಂದು ಹೇಳಿದ ಸಿಂಗ್,‘ನಾವು ಒಮ್ಮೆ ಹಸ್ತಕ್ಷೇಪ ಮಾಡಿದ್ದೆವು,ಸಂಧು ಪತ್ನಿಯನ್ನು ಥಳಿಸುತ್ತಿದ್ದ ವೀಡಿಯೊದೊಂದಿಗೆ ನ್ಯೂಯಾರ್ಕ್ ಪೊಲೀಸರ ಬಳಿಗೂ ಹೋಗಿದ್ದೆವು. ಆದರೆ ಆತ ತಪ್ಪಾಗಿದೆ,ತನ್ನನ್ನು ಉಳಿಸು ಎಂದು ನನ್ನ ಮಗಳಲ್ಲಿ ಬೇಡಿಕೊಂಡಿದ್ದ. ಅವಳ ಇಚ್ಛೆಯ ಮೇರೆಗೆ ನಾವು ಅದಕ್ಕೆ ಹೆಚ್ಚು ಒತ್ತು ನೀಡಿರಲಿಲ್ಲ ’ ಎಂದರು.

ಕೌರ್ ಮೃತದೇಹವನ್ನು ಭಾರತಕ್ಕೆ ತರಲು ನೆರವಾಗುವಂತೆ ಸಿಂಗ್ ಕುಟುಂಬವು ಸರಕಾರವನ್ನು ಕೋರಿಕೊಂಡಿದೆ. ಸಂಧು ತನ್ನ ಪತ್ನಿಯನ್ನು ಥಳಿಸುತ್ತಿರುವ ಹಲವಾರು ವೀಡಿಯೊಗಳು ವೈರಲ್ ಆಗಿವೆ. ಒಂದು ವೀಡಿಯೊದಲ್ಲಿ ಮಕ್ಕಳು,ಅಪ್ಪಾ,ಅಮ್ಮನನ್ನು ಹೊಡೆಯಬೇಡಿ ’ಎಂದು ಆಕ್ರಂದನ ಮಾಡುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ.

ತನ್ನ ಪತಿ ವಿವಾಹಬಾಹಿರ ಸಂಬಂಧಗಳನ್ನು ಹೊಂದಿದ್ದಾನೆ ಎಂದೂ ವೀಡಿಯೊದಲ್ಲಿ ಆರೋಪಿಸಿರುವ ಕೌರ್,ಆತನ ಕುಟುಂಬ ಈ ಬಗ್ಗೆ ಮಾತನಾಡುತ್ತಿಲ್ಲ,ಅವರು ಹಿಂಸಾಚಾರವನ್ನು ಉತ್ತೇಜಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸಿಖ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ಲೈಂಗಿಕ ಮತ್ತು ಕೌಟುಂಬಿಕ ಹಿಂಸೆಯ ಸಂತ್ರಸ್ತರಿಗಾಗಿ ಕಾರ್ಯ ನಿರ್ವಹಿಸುತ್ತಿರುವ ದಿ ಕೌರ್ ಮೂವ್ಮೆಂಟ್ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊಗಳನ್ನು ಶೇರ್ ಮಾಡಿಕೊಂಡಿದೆ.

There are collosal problems in our family & social structure which we conveniently ignore or deny to accept. #DomesticViolence against women is one such serious problem. Suicide by Mandeep Kaur a NRI Punjabi woman is a wake up call to accept the problem and fix it accordingly. pic.twitter.com/F8WpkiLCZY

— Gurshamshir Singh (@gurshamshir) August 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X