Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಲೆಯಾದ ಫಾಝಿಲ್ ಸ್ಮರಣಾರ್ಥ ಬ್ಲಡ್...

ಕೊಲೆಯಾದ ಫಾಝಿಲ್ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ7 Aug 2022 7:28 PM IST
share
ಕೊಲೆಯಾದ ಫಾಝಿಲ್ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

ಮಂಗಳೂರು : ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 6ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಥೆಯ ಸದಸ್ಯರಾದ ಕೊಲೆಯಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥ ದ.ಕ. ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಏಕ ಕಾಲಕ್ಕೆ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಬ್ಲಡ್ ಡೊನೇಷನ್ ಫಿಯೆಸ್ಟಾವು 542 ಯುನಿಟ್ ರಕ್ತ ಸಂಗ್ರಹದೊಂದಿಗೆ ನಡೆಯಿತು.

ಪುತ್ತೂರು : ಬಿಗ್ ಮೂವರ್ಸ್ ಗೋಳಿಕಟ್ಟೆ ಹಾಗೂ ಸಿಟಿ ಬ್ರದರ್ಸ್ ಜಂಟಿ ಆಶ್ರಯದಲ್ಲಿ ಯೆನೆಪೊಯ ಆಸ್ಪತ್ರೆ ದೇರಳಕಟ್ಟೆ ರಕ್ತನಿಧಿಯ ಸಹಯೋಗದೊಂದಿಗೆ ಪುತ್ತೂರಿನ ಲಯನ್ಸ್ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 101  ರಕ್ತದಾನಿಗಳು ರಕ್ತದಾನ ಮಾಡಿದರು.

ಉಳ್ಳಾಲ : B ಬಾಯ್ಸ್ ಅಳೇಕಲ, ಉಳ್ಳಾಲ ಹಾಗೂ ಮೆಹಫಿಲ್ ಗೈಸ್ ಅಳೇಕಲ, ಉಳ್ಳಾಲ ಜಂಟಿ ಆಶ್ರಯದಲ್ಲಿ ಆಶಾ ಜ್ಯೋತಿ ರಕ್ತಕೇಂದ್ರ ಶಿವಮೊಗ್ಗ ರಕ್ತನಿಧಿಯ ಸಹಯೋಗದೊಂದಿಗೆ ಉಳ್ಳಾಲದ ಅಳೇಕಲದಲ್ಲಿರುವ ಮದನಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 202 ರಕ್ತದಾನಿಗಳು ರಕ್ತದಾನ ಮಾಡಿದರು.

G.C.C ಹೆಲ್ಪ್ ಲೈನ್ ಟ್ರಸ್ಟ್ ಅಮ್ಮುಂಜೆ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ರಕ್ತನಿಧಿಯ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಬೀರಂದಡಿಯ ಮುನವ್ವರುಲ್ ಇಸ್ಲಾಂ ಮದರಸದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 133 ರಕ್ತದಾನಿಗಳು ರಕ್ತದಾನ ಮಾಡಿದರು.

ಉಳಾಯಿಬೆಟ್ಟು: UBT ಹೆಲ್ಪ್ ಗೈಸ್, SKSSF ಉಳಾಯಿಬೆಟ್ಟು, SSF ಉಳಾಯಿಬೆಟ್ಟು, PFI ಉಳಾಯಿಬೆಟ್ಟು, E2 ಗೈಸ್, SMA, D2M ಉಳಾಯಿಬೆಟ್ಟು, ಪ್ಲೇ ಬಾಯ್ಸ್, ಚಾರ್ ಮಿನಾರ್ ಹಾಗೂ ಜಾನ್ ಗೈಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಜ್ಯೋತಿ, ಮಂಗಳೂರು ರಕ್ತನಿಧಿಯ ಸಹಯೋಗದೊಂದಿಗೆ ಉಳಾಯಿಬೆಟ್ಟುವಿನ ಅಲ್ ಮದೀನ ಮಸೀದಿ ಹತ್ತಿರವಿರುವ ಜಿ.ಎಂ.ಕೆ ಕಟ್ಟಡದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 106 ರಕ್ತದಾನಿಗಳು ರಕ್ತದಾನ ಮಾಡಿ ಜೀವದಾನಿಗಳಾದರು.

ಜಿಲ್ಲೆಯಾದ್ಯಂತ ಏಕ ಕಾಲದಲ್ಲಿ ನಡೆದ ಈ ಬೃಹತ್ ಸಾರ್ವಜನಿಕ ರಕ್ತದಾನ ಅಭಿಯಾನದಲ್ಲಿ ರಕ್ತದಾನ ಮಾಡಿದ ದಾನಿಗಳು, ಬ್ಲಡ್ ಬ್ಯಾಂಕ್ ಸಿಬ್ಬಂದಿ, ಸಹಕಾರ ನೀಡಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಹಾಗು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದ್ದಾರೆ.

2016 ಆಗಸ್ಟ್ 08ಕ್ಕೆ ಸ್ಥಾಪನೆಗೊಂಡ ಸಂಸ್ಥೆಯು ಕರ್ನಾಟಕ ಸರಕಾರದಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟಿದ್ದು, ಈ ವರೆಗೆ 212 ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 28 ಆಸ್ಪತ್ರೆಯ ರಕ್ತನಿಧಿಗಳ ಸಹಯೋಗದೊಂದಿಗೆ 207 ರಕ್ತದಾನ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 12154 ಯೂನಿಟ್ ರಕ್ತವನ್ನು ಸಂಗ್ರಹಿಸಿದ್ದು ಹಾಗೂ ತುರ್ತು ಸಂದರ್ಭಗಳಲ್ಲಿ ನೇರವಾಗಿ ರಕ್ತನಿಧಿಗಳಿಗೆ 2383 ರಕ್ತದಾನಿಗಳನ್ನು ಪೂರೈಸುವ ಮೂಲಕ ಒಟ್ಟು 14537 ಯೂನಿಟ್ ರಕ್ತವನ್ನು ರಕ್ತನಿಧಿಗಳಿಗೆ ನೀಡುವಲ್ಲಿ ಯಶಸ್ವಿಯಾಗಿದೆ.

ಒಂದೇ ತಿಂಗಳಿನಲ್ಲಿ ಗರಿಷ್ಟ 24 ರಕ್ತದಾನ ಶಿಬಿರಗಳನ್ನು ಹಾಗೂ ಒಂದೇ ದಿನದಲ್ಲಿ ಗರಿಷ್ಟ 21 ರಕ್ತದಾನ ಶಿಬಿರಗಳನ್ನು ಆಯೋಜಿಸಿದ ಕೀರ್ತಿಯನ್ನು ಕೂಡಾ ತನ್ನದಾಗಿಸಿ ಕೊಂಡಿದೆ. ದಿನನಿತ್ಯ ಸರಾಸರಿ 20 ರಿಂದ 30 ಯೂನಿಟ್ ರಕ್ತವನ್ನು ರೋಗಿಗಳಿಗೆ ಪೂರೈಸುತ್ತಿದೆ. ಅಲ್ಲದೇ ಪ್ರತಿನಿತ್ಯ ಆವಶ್ಯವಿರುವ ತಾಜಾ ರಕ್ತಗಳ ತುರ್ತು ಮನವಿಯನ್ನು ಕೂಡಾ ಸ್ವೀಕರಿಸಿ ದಾನಿಗಳನ್ನು ಹುಡುಕಿ ಅಗತ್ಯವಿರುವ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಪೂರೈಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದೆ.

COVID - 19 ತುರ್ತು ಸಮಯದಲ್ಲಿ 672 ರಕ್ತದಾನಿಗಳನ್ನು ನೇರವಾಗಿ ರಕ್ತನಿಧಿಗಳಿಗೆ ಪೂರೈಸಿ ಕೊರೋನ ಭೀತಿಯ ನಡುವೆಯೂ ತುರ್ತು ಸಂದರ್ಭದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ರಕ್ತದಾನಿಗಳನ್ನು ಪೂರೈಕೆ ಮಾಡಿದ ಕೀರ್ತಿಗೆ ಪಾತ್ರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X