ಪ್ರಾಕೃತಿಕ ವಿಕೋಪದಡಿ ಉಡುಪಿ ಜಿಲ್ಲೆಗೆ 15 ಕೋಟಿ ರೂ. ತುರ್ತು ಪರಿಹಾರ ಬಿಡುಗಡೆ

ಫೈಲ್ ಫೋಟೊ
ಉಡುಪಿ, ಆ.7: ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದ ಅಪಾರ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ತಕ್ಷಣದ ಪರಿಹಾರಕ್ಕಾಗಿ ಉಡುಪಿ ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ ಗೊಳಿಸಿದೆ.
ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಆದ ಮಾನವ ಜೀವಹಾನಿ, ಜಾನುವಾರು ಜೀವ ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಶೀಘ್ರದಲ್ಲಿ ಕೈಗೊಳ್ಳಲು ಈ ಅನುದಾನ ಬಿಡುಗಡೆ ಗೊಳಿಸಲಾಗಿದೆ. ಉಡುಪಿ ಜಿಲ್ಲೆಗೆ ಪ್ರಾಕೃತಿಕ ವಿಕೋಪದ ಪರಿಹಾರಕ್ಕೆ 15 ಕೋಟಿ ರೂ. ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.
Next Story





