ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ
ಪ್ರವೀಣ್ ನೆಟ್ಟಾರು
ಸುಳ್ಯ: ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಯ ನಾವೂರಿನ ಆಬಿದ್ (22), ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ (28) ಬಂಧಿತರು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಆರಕ್ಕೇರಿದೆ. ಜು.28ರಂದು ಸವಣೂರಿನ ಝಾಕಿರ್ (29) ಮತ್ತು ಬೆಳ್ಳಾರೆಯ ಶಫೀಕ್ (27) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ಆ.2ರಂದು ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ (32) ಹಾಗು ಹಾರಿಸ್ (42) ಎಂಬವರನ್ನು ಬಂಧಿಸಲಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
Next Story