Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಝಾದ ಮೇಲಿನ ಇಸ್ರೇಲ್ ದಾಳಿ ಅಕ್ರಮ:...

ಗಾಝಾದ ಮೇಲಿನ ಇಸ್ರೇಲ್ ದಾಳಿ ಅಕ್ರಮ: ವಿಶ್ವಸಂಸ್ಥೆ ವಿಶೇಷ ಪ್ರತಿನಿಧಿ

ವಾರ್ತಾಭಾರತಿವಾರ್ತಾಭಾರತಿ7 Aug 2022 11:49 PM IST
share
ಗಾಝಾದ ಮೇಲಿನ ಇಸ್ರೇಲ್ ದಾಳಿ ಅಕ್ರಮ: ವಿಶ್ವಸಂಸ್ಥೆ ವಿಶೇಷ ಪ್ರತಿನಿಧಿ

ವಿಶ್ವಸಂಸ್ಥೆ, ಆ.7: ಆಕ್ರಮಿತ ಪಶ್ಚಿಮ ದಂಡೆಯಲ್ಲಿನ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ವಾಯುದಾಳಿ ಕಾನೂನುಬಾಹಿರವಷ್ಟೇ ಅಲ್ಲ ಬೇಜವಾಬ್ದಾರಿಯ ಕೃತ್ಯವಾಗಿದ್ದು, ಈ ಹಿಂಸಾಚಾರ ಅಂತ್ಯಕ್ಕೆ ರಾಜತಾಂತ್ರಿಕ ಕ್ರಮದ ಅಗತ್ಯವಿದೆ ಎಂದು ಆಕ್ರಮಿತ ಪೆಲೆಸ್ತೀನ್ ಪ್ರದೇಶಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಫ್ರಾನ್ಸೆಸ್ಕಾ ಅಲ್ಬಾನೆರ್ ಹೇಳಿರುವುದಾಗಿ ಅಲ್ಜಝೀರಾ ವರದಿ ಮಾಡಿದೆ. ಗಾಝಾ ನಗರದ ಮೇಲೆ ಶುಕ್ರವಾರ ಇಸ್ರೇಲ್ ವಾಯುದಾಳಿ ಆರಂಭಿಸಿದೆ. 

ಈಗ ಅಲ್ಲಿನ ಪರಿಸ್ಥಿತಿ ಮಾನವೀಯ ಬಿಕ್ಕಟ್ಟಿನ ಅಂಚಿನಲ್ಲಿದೆ. ಪೆಲೆಸ್ತೀನೀಯರು ಎಲ್ಲೇ ಇದ್ದರೂ ಅವರ ಯೋಗಕ್ಷೇಮವನ್ನು ಖಾತರಿ ಪಡಿಸುವ ಏಕೈಕ ಮಾರ್ಗವೆಂದರೆ ಗಾಝಾದ ಮೇಲಿನ ಮುತ್ತಿಗೆಯನ್ನು ತೆಗೆದುಹಾಕಿ ಪೆಲೆಸ್ತೀನೀಯರು ಅಲ್ಲಿಗೆ ಪ್ರವೇಶಿಸಲು ನೆರವಾಗುವುದು ಎಂದವರು ಹೇಳಿದ್ದಾರೆ. ಇಸ್ರೇಲ್ಗೆ ಸ್ವರಕ್ಷಣೆಯ ಅಧಿಕಾರವಿದೆ ಎಂಬ ಅಮೆರಿಕದ ಹೇಳಿಕೆಯನ್ನು ಖಂಡಿಸಿದ ಅವರು, ಈ ಸಂಷರ್ಘ ತನ್ನನ್ನು ತಾನು ರಕ್ಷಿಸಿಕೊಳ್ಳುವ ನಡೆ ಎಂದು ಇಸ್ರೇಲ್ ಪ್ರತಿಪಾದಿಸುವಂತಿಲ್ಲ ಎಂದರು. ಅಮೆರಿಕದ ಹೇಳಿಕೆಯನ್ನು ಬ್ರಿಟನ್ ಪ್ರಧಾನಿ ಅಭ್ಯರ್ಥಿ ಲಿರ್ ಟ್ರುಸ್ ಕೂಡಾ ಬೆಂಬಲಿಸಿದ್ದರು. ಪೆಲೆಸ್ತೀನ್ನಲ್ಲಿ ರಕ್ಷಣೆಯ ಅಗತ್ಯವಿದೆ. ನನಗೆ ಮಾತ್ರವಲ್ಲ, ನಾಗರಿಕರ ಜೀವ ರಕ್ಷಿಸಲು ರಕ್ಷಣೆಯ ಅಗತ್ಯವಿದೆ. 

1967ರಿಂದಲೂ ಇಸ್ರೇಲ್ ತನ್ನನ್ನು ನಾಗರಿಕರಿಂದ ರಕ್ಷಿಸಿಕೊಳ್ಳುತ್ತಿದೆಯೇ ಎಂದವರು ಪ್ರಶ್ನಿಸಿದ್ದಾರೆ. ಆಕ್ರಮಿತ ಪೆಲೆಸ್ತೀನ್ ಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ಆ ಬಗ್ಗೆ ವಿಶ್ವಸಂಸ್ಥೆಗೆ ವರದಿ ಮಾಡುವ ಸ್ವತಂತ್ರ ತಜ್ಞರಾಗಿ ವಿಶೇಷ ಪ್ರತಿನಿಧಿ ಕಾರ್ಯ ನಿರ್ವಹಿಸುತ್ತಾರೆ. ಗಾಝಾದಲ್ಲಿ ಅಂತರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆಯೇ ಎಂದು ವಿಶ್ವಸಂಸ್ಥೆ ಪರಿಶೀಲಿಸಿ ಇದಕ್ಕೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಹೊಣೆಗಾರಿಕೆಯ ಕೊರತೆ ಇಸ್ರೇಲ್ ಅನ್ನು ಬಲಪಡಿಸುತ್ತಿದೆ. ಆಕ್ರಮಣವನ್ನು ಕೊನೆಗೊಳಿಸುವುದು ಇದಕ್ಕೆ ಇರುವ ಏಕೈಕ ಪರಿಹಾರವಾಗಿದೆ ಎಂದು ಅಲ್ಬಾನೆರ್ ಹೇಳಿದ್ದಾರೆ. 

ಗಾಝಾದಲ್ಲಿ 2021ರ ಮೇ ತಿಂಗಳಿನಲ್ಲಿ ನಡೆದ ಕ್ರೂರ ಯುದ್ಧದ ಬಳಿಕ ವಿಶ್ವಸಂಸ್ಥೆ ನೇಮಿಸಿದ್ದ ಸ್ವತಂತ್ರ ತನಿಖಾ ಆಯೋಗವು ‘ಪೆಲೆಸ್ತೀನಿಯನ್ ಮುಖಂಡರು ಭವಿಷ್ಯದ ದೇಶಕ್ಕಾಗಿ ಬಯಸುತ್ತಿರುವ ಭೂಮಿಯ ಮೇಲಿನ ಆಕ್ರಮಣವನ್ನು ಕೊನೆಗೊಳಿಸುವುದಕ್ಕಿಂತಲೂ ಹೆಚ್ಚಿನದನ್ನು ಇಸ್ರೇಲ್ ಮಾಡಬೇಕಿದೆ. ಪೆಲೆಸ್ತೀನೀಯರಿಗೂ ಸಮಾನ ಮಾನವ ಹಕ್ಕುಗಳ ಅವಕಾಶ ನೀಡಬೇಕು ’ ಎಂದು ವರದಿ ನೀಡಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X