ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ ಓರ್ವ ಸಾವು, ಹಲವಾರು ಮನೆಗಳಿಗೆ ಹಾನಿ
Photo:PTI
ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ಪ್ರವಾಹದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹಲವಾರು ಮನೆಗಳಿಗೆ ಹಾನಿಯಾಗಿದೆ ಎಂದು NDTV ವರದಿ ಮಾಡಿದೆ.
ಸಲೂನಿಯ ಭಡೋಗಾ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿನ ಹಲವಾರು ಮನೆಗಳಿಗೆ ಹಾನಿಯಾಗಿದೆ ಮತ್ತು ಕೃಷಿ ಭೂಮಿಗೆ ನೀರು ನುಗ್ಗಿದೆ.
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕನಿಷ್ಠ ಎರಡು ಗ್ರಾಮಗಳು ಮೇಘಸ್ಫೋಟಕ್ಕೆ ಸಿಲುಕಿವೆ. ವರದಿಯಲ್ಲಿ ಬಲಿಯಾದವರನ್ನು 15 ವರ್ಷದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.
Next Story