Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವರ್ಕರ್, ಗೋಳ್ವಾಲ್ಕರ್, ಬಿಜೆಪಿಯ...

ಸಾವರ್ಕರ್, ಗೋಳ್ವಾಲ್ಕರ್, ಬಿಜೆಪಿಯ ಮುಖವಾಣಿ ಆರ್ಗನೈಸರ್ ಭಾರತದ ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದರು: ಸಿದ್ದರಾಮಯ್ಯ

"ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರ ಧ್ವಜದ ಬಗ್ಗೆ ಬಿಜೆಪಿಗೆ ಗೌರವ ಇಲ್ಲ"

ವಾರ್ತಾಭಾರತಿವಾರ್ತಾಭಾರತಿ8 Aug 2022 1:43 PM IST
share
ಸಾವರ್ಕರ್, ಗೋಳ್ವಾಲ್ಕರ್, ಬಿಜೆಪಿಯ ಮುಖವಾಣಿ ಆರ್ಗನೈಸರ್ ಭಾರತದ ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದರು: ಸಿದ್ದರಾಮಯ್ಯ

ಮೈಸೂರು : ಸಾವರ್ಕರ್ ಭಾರತದ ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದರು. ಈ ಸಾವರ್ಕರ್ ರನ್ನು ಆರೆಸೆಸ್ಸ್ ಆರಾಧನೆ ಮಾಡುತ್ತದೆ, ಆರೆಸೆಸ್ಸ್‌ನ ಸರಸಂಘಚಾಲಕರಾಗಿದ್ದ ಗೋಳ್ವಾಲ್ಕರ್ ವಿರೋಧಿಸಿದ್ದರು, ಆರ್ಗನೈಸರ್ ಎಂಬ ಬಿಜೆಪಿಯ ಮುಖವಾಣಿ ವಿರೋಧ ಮಾಡಿತ್ತು. ಆಗ ವಿರೋಧ ಮಾಡಿ ಈಗ 'ಹರ್ ಘರ್ ತಿರಂಗ' ಎಂದು ಅಭಿಯಾನ ಮಾಡೋದು ನಾಟಕವಲ್ವ? ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರ ಧ್ವಜದ ಬಗ್ಗೆ ಬಿಜೆಪಿಗೆ ಗೌರವ ಇಲ್ಲ. ಅಮೃತ ಮಹೋತ್ಸವವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ನಾವು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡುತ್ತಿದ್ದೇವೆ, ಕಾರಣ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ಬಿಜೆಪಿಗೆ ನನ್ನ ಕಂಡರೆ ಭಯ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಬಿಜೆಪಿ ಹೆದರಿದೆ. ಅದೇ ಕಾರಣಕ್ಕೆ ನನ್ನ ಜನ್ಮದಿನ ಮುಗಿದು ವಾರ ಕಳೆದರೂ ಟೀಕೆ ಮಾಡೋದು ನಿಲ್ಲಿಸಿಲ್ಲ ಎಂದು ಹೇಳಿದರು.

ತಗಡೂರು ರಾಮಚಂದ್ರ ರಾವ್ ಅವರು ಸ್ವಾತಂತ್ರ್ಯ ಹೋರಾಟಗಾರರು, ಅವರನ್ನು ಕರ್ನಾಟಕದ ಗಾಂಧಿ ಎನ್ನುತ್ತಾರೆ. ಹಾಗಾಗಿ ಇಂದು ತಗಡೂರಿಂದ ಪಾದಯಾತ್ರೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಬೇಕು ಎಂದು ಪಕ್ಷ ತೀರ್ಮಾನ ಮಾಡಿದೆ, ನಾನೊಬ್ಬ ಕಾಂಗ್ರೆಸಿಗನಾಗಿ ಪಕ್ಷದ ಕೆಲಸ ಮಾಡುತ್ತಿದ್ದೇನೆ. ವರುಣಾದಿಂದ ಸ್ಪರ್ಧೆ ಮಾಡುತ್ತೇನೆ ಎಂಬುದು ಬರಿ ಊಹಾಪೋಹ. ನಾನು ಇದಕ್ಕೂ ಮೊದಲು ಮಾಲೂರು, ಚಿಂತಾಮಣಿ, ಚಾಮುಂಡೇಶ್ವರಿಯಲ್ಲಿ ಪಾದಯಾತ್ರೆ ಮಾಡಿದ್ದೆ, ಈ ಎಲ್ಲಾ ಕಡೆ ಚುನಾವಣೆಗೆ ನಿಲ್ಲೋಕಾಗುತ್ತಾ? ಚುನಾವಣೆ ಹತ್ತಿರ ಬಂದಾಗ ಯಾವ ಕ್ಷೇತ್ರ ಎಂದು ಎಲ್ಲರಿಗೂ ಹೇಳ್ತೇನೆ ಎಂದರು.

ಭಕ್ತವತ್ಸಲಂ ನೇತೃತ್ವದಲ್ಲಿ ಸಮಿತಿ ಮಾಡಿದ್ದರು, ಅವರು ಎರಡೇ ತಿಂಗಳಲ್ಲಿ ವರದಿ ನೀಡಿದ್ದಾರೆ. ಇದನ್ನು ಸರ್ಕಾರ ತೆಗೆದುಕೊಂಡಿದೆ. ಅದರ ಬದಲು ಕಾಂತರಾಜ್ ಅವರ ಸಮಿತಿ ನೀಡಿದ್ದ ವರದಿ ಪಡೆಯಬೇಕಿತ್ತು. ಕಾರಣ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಲು ಮೂರು ಹಂತದ ಪರೀಕ್ಷೆ ಆಗಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ನಿರ್ಣಯದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದೆ. ಹಿಂದುಳಿದ ಜಾತಿಗಳ ಬಗ್ಗೆ ಕರಾರುವಕ್ಕಾದ ಮಾಹಿತಿ ಇರಬೇಕು, ಇದಕ್ಕಾಗಿ ಒಂದು ನಿರ್ಧಿಷ್ಟ ಕಮಿಷನ್ ರಚಿಸಿ, ಅವರು ವರದಿ ನೀಡಬೇಕು. ಈ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿದರೆ ಮಾತ್ರ ಮೀಸಲಾತಿ ನೀಡಲು ಸಾಧ್ಯವಿದೆ ಎಂದು ವಿವರಿಸಿದರು.

ಮಳೆಯಿಂದ ಸಾವಿರಾರು ಕೋಟಿ ನಷ್ಟವಾಗಿದೆ. ಸುಮಾರು ಒಂದು ಲಕ್ಷ ಹೆಕ್ಟೇರ್ ಗೂ ಹೆಚ್ಚಿನ ಬೆಳೆ ನಷ್ಟವಾಗಿದೆ. ಈ ಬಗ್ಗೆ ಮುಂದೆ ಇನ್ನಷ್ಟು ಮಾಹಿತಿ ನೀಡುತ್ತೇನೆ. ರಾಜ್ಯದಲ್ಲಿ ಅಹಿಂದಾ ಮತಗಳನ್ನು ತೆಗೆದುಹಾಕುವ ಕೆಲಸ ನಡೀತಿದೆ ಎಂದು ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ವರ್ಗದ ಜನರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸುತ್ತಾರೆ ಎಂದು ತೆಗೆದು ಹಾಕುತ್ತಾರೆ ಅನ್ನಿಸುತ್ತೆ. ಚುನಾವಣೆ ಗೆಲ್ಲಲು ಏನನ್ನೂ ಬೇಕಾದರೂ ಮಾಡುತ್ತಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್ ನವರು. ಆರೆಸೆಸ್ಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿತ್ತಾ, ಜನಸಂಘ ಹುಟ್ಟಿದ್ದು 1951 ರಲ್ಲಿ, ಬಿಜೆಪಿಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೊತ್ತಾ? ಆರೆಸೆಸ್ಸ್‌ ನವರು ಯಾರಾದ್ರೂ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ ? ಸಂಘದ ಸ್ಥಾಪಕರಾದ ಹೆಡ್ಗೆವಾರ್, ಗೋಳ್ವಾಲ್ಕರ್ ಜೈಲಿಗೆ ಹೋಗಿದ್ರಾ ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಷ್ಟ್ರಧ್ವಜವನ್ನು ಖಾದಿ ಬಟ್ಟೆಯಿಂದ ತಯಾರಿಸಬೇಕು. ಪಾಲಿಸ್ಟರ್ ಇಂದ ಮಾಡಬಾರದು. ಖಾದಿ ಬಟ್ಟೆ ಕೈಮಗ್ಗಗಳಲ್ಲಿ ತಯಾರಾಗುತ್ತೆ. ಇದರ ಉದ್ದೇಶ ಏನೆಂದರೆ ಚರಕದಿಂದ ನೂಲು ತೆಗೆಯುವ ಕರಕುಶಲ ಕರ್ಮಿಗಳಿಗೆ ಉದ್ಯೋಗ ಸಿಗಬೇಕು ಎಂದು. ಚೀನಾದ ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜ ತಯಾರಿಸಿದರೆ ಇದರ ಉದ್ದೇಶವೇ ಹಾಳಾಗುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚೀನಾದಿಂದ ಆಮದು ಜಾಸ್ತಿಯಾಗಿ, ರಫ್ತು ಕಡಿಮೆಯಾಗಿದೆ. ಮೇಕ್ ಇನ್ ಇಂಡಿಯಾ ಎಂದರೆ ರಫ್ತು ಜಾಸ್ತಿಯಾಗಬೇಕಿತ್ತು. ಹೊರಗಡೆಯಿಂದ ತಂದು ಕೊಟ್ಟರೆ ಅದಕ್ಕೆ ಅರ್ಥ ಇರುತ್ತಾ ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X