Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹರ್ ಘರ್ ತಿರಂಗ | ರಾಜ್ಯದಲ್ಲಿ 1 ಕೋಟಿ...

ಹರ್ ಘರ್ ತಿರಂಗ | ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ8 Aug 2022 8:35 PM IST
share
ಹರ್ ಘರ್ ತಿರಂಗ | ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಆ.8: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಸೋಮವಾರ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಸಿದ್ಧತೆಗಳ ಕುರಿತು ವೀಡಿಯೊ ಕಾನ್ಫರೆನ್ಸ್ ಮೂಲಕ ಪರಿಶೀಲನೆ ನಡೆಸಿದ ಅವರು, ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಧ್ವಜ ವಿತರಣೆ ಕಾರ್ಯ ನಡೆಯುತ್ತಿದೆ. ಆ.13 ರಂದೇ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಸೂಚಿಸಿದರು.

ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಸರಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಮನೆಗಳಲ್ಲಿ ಆಗಸ್ಟ್ 13 ರಂದು ಧ್ವಜಾರೋಹಣ ಮಾಡಿದರೆ, 15ರ ವರೆಗೆ ಇರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಗದಿತ ಗುರಿ ಸಾಧಿಸಲು ಜಿಲ್ಲಾಡಳಿತಗಳಿಗೆ ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ಇದರೊಂದಿಗೆ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ, ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರನ್ನು ಆ.9 ರಿಂದ 14ರ ನಡುವೆ, ಅವರ ಮನೆಗೆ ತೆರಳಿ ಸನ್ಮಾನಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೂ ಇದರಲ್ಲಿ ಭಾಗಿಯಾಗುವಂತೆ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ್, ಬಿ.ಸಿ. ಪಾಟೀಲ್, ಆರಗ ಜ್ಞಾನೇಂದ್ರ, ಆನಂದ್ ಸಿಂಗ್, ನಾರಾಯಣಗೌಡ, ಸುನಿಲ್ ಕುಮಾರ್, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ ಮತ್ತು ಇತರ ಹಿರಿಯ ಅಧಿಕಾರಿಗಳು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X