Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 89 ಸಾವಿರ ಹೆಕ್ಟೇರ್ ಕೃಷಿಬೆಳೆ ಹಾನಿ,...

89 ಸಾವಿರ ಹೆಕ್ಟೇರ್ ಕೃಷಿಬೆಳೆ ಹಾನಿ, ಜಂಟಿ ಸಮೀಕ್ಷೆ ಮೂಲಕ ನಿಖರ ಹಾನಿ ದಾಖಲಿಸಲು ಸಚಿವ ಬಿ.ಸಿ.ಪಾಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Aug 2022 5:30 PM IST
share
89 ಸಾವಿರ ಹೆಕ್ಟೇರ್ ಕೃಷಿಬೆಳೆ ಹಾನಿ, ಜಂಟಿ ಸಮೀಕ್ಷೆ ಮೂಲಕ ನಿಖರ ಹಾನಿ ದಾಖಲಿಸಲು ಸಚಿವ ಬಿ.ಸಿ.ಪಾಟೀಲ್ ಸೂಚನೆ

ಧಾರವಾಡ, ಆ.9: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 89,148 ಹೆಕ್ಟೇರ್ ಪ್ರದೇಶದ ಕೃಷಿಬೆಳೆಗಳು ಹಾನಿಯಾಗಿವೆ. ಹೆಸರು, ಉದ್ದು ಕೊಯ್ಲು ಮಾಡಲು ಸಾಧ್ಯವಾಗದೇ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಬೆಳೆಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಂಟಿ ಸಮೀಕ್ಷೆ ಸಮರ್ಪಕವಾಗಿ ಕೈಗೊಂಡು ಹಾನಿಯ ನಿಖರ ಮಾಹಿತಿ ದಾಖಲಿಸಬೇಕು. ಬೆಳೆ ವಿಮಾ ಕಂಪೆನಿಗಳ ಪ್ರತಿನಿಧಿಗಳು ಸ್ಥಳೀಯವಾಗಿ ಲಭ್ಯ ಇರಬೇಕು ಎಂದರು.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ರೈತರಿಗೆ ಸ್ಪಂದಿಸಬೇಕು. ಬೆಳೆ ವಿಮಾ ಕಂಪೆನಿಗಳ ಪ್ರತಿನಿಧಿಗಳು ಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಲಭ್ಯ ಇರಬೇಕು. ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್ ಮಾರ್ಗಸೂಚಿಗಳನ್ವಯ ಪರಿಹಾರಕ್ಕೆ ಜಂಟಿ ಸಮೀಕ್ಷೆ ಸಮರ್ಪಕವಾಗಿ ನಡೆಯಬೇಕು ಎಂದು ಅವರು ಸೂಚಿಸಿದರು.

ಈ ವರ್ಷ ಅಧಿಕ ಮಳೆಯಿಂದ ತುರ್ತು ಪರಿಸ್ಥಿತಿಯ ಸನ್ನಿವೇಶ ಸೃಷ್ಟಿಯಾಗಿದೆ. ಅಧಿಕಾರಿಗಳು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿ, ರೈತರಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿರುವ ರೈತರು ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

ರಾಜ್ಯದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 34 ಸಾವಿರ ಲೀಟರ್ ನ್ಯಾನೋ ಯೂರಿಯಾ ಬಳಸಿದ್ದಾರೆ. ಜಾಗತಿಕ ತಾಪಮಾನ ನಿಯಂತ್ರಣ ಹಾಗೂ ಭೂಮಿಯ ಫಲವತ್ತತೆ ಹೆಚ್ಚಳಕ್ಕೆ ಇದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಪ್ರಶಂಸನೀಯ ಎಂದು ಅವರು ತಿಳಿಸಿದರು.

ಇದು ಗಂಭೀರವಾದ ಸಭೆ ಇಂತಹ ಸಭೆಗೆ ಗೈರುಹಾಜರಾಗಿರುವ ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಬಿ.ಸಿ.ಪಾಟೀಲ್ ಸಚಿವರು ಸೂಚಿಸಿದರು.

ಶಾಸಕ ಅಮೃತ ದೇಸಾಯಿ ಮಾತನಾಡಿ, ಈ ಬಾರಿ ಉತ್ತಮ ಬೆಳೆ ಬಂದಿತ್ತು ಅತಿವೃಷ್ಟಿಯಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಬೆಳೆವಿಮಾ ಕಂಪೆನಿಗಳ ಬಗ್ಗೆ ರೈತರು ಅಸಮಾಧಾನ ಹೊಂದಿದ್ದಾರೆ. ಕಂಪೆನಿಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ.ಮಾತನಾಡಿ, ಜೂನ್ ಹಾಗೂ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸುಮಾರು 89 ಸಾವಿರ ಹೆಕ್ಟೇರ್ ಗೂ ಅಧಿಕ ಕೃಷಿ ಬೆಳೆ ಹಾನಿಯಾಗಿದೆ. ಇದರಲ್ಲಿ ಹೆಸರು ಬೆಳೆ ಹಾನಿಯ ಪ್ರಮಾಣವೇ 61 ಸಾವಿರ ಹೆಕ್ಟೇರಿನಷ್ಟಿದೆ ಎಂದರು.

ಹೆಚ್ಚಿನ ಮಳೆಯಿಂದ ಹೆಸರು ಮತ್ತು ಉದ್ದು ಬೆಳೆಯ ಕೋಯ್ಲು ಕಷ್ಟಸಾಧ್ಯವಾಗಿದೆ. ಅಧಿಕ ತೇವಾಂಶದಿಂದ ಶೇಂಗಾ ಕೊಳೆಯುವ ಹಂತದಲ್ಲಿದೆ. ಹತ್ತಿ, ಮೆಕ್ಕೆಜೋಳ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. 1,48,166 ರೈತರು ಬೆಳೆವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬೀಜ, ರಸಗೊಬ್ಬರ ಪೂರೈಕೆ ಸಮರ್ಪಕವಾಗಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X