BJP ಮುಖಂಡ ಸೇರಿ ಮೂವರಿಂದ ಖೋಟಾನೋಟು ಚಲಾವಣೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ, ಆ.9: ಹಾಲು ಮಾರುವ ಸೋಗಿನಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಬಿಜೆಪಿ (BJP ) ಮುಖಂಡ ಸಾಗರ್ ಕಾಶಪ್ಪ ಸೇರಿ ಮೂವರನ್ನು ಧಾರವಾಡ ಜಿಲ್ಲೆ ಕುಂದಗೋಳ ಠಾಣೆ ಪೊಲೀಸರು ಬಂಧಿಸಿದ್ದು, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಗಳಿಂದ 500 ರೂ.ಮುಖಬೆಲೆಯ 47 ಖೋಟಾನೋಟು ಮತ್ತು ಕಲರ್ ಜೆರಾಕ್ಸ್ ಯಂತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಾಗರ್ ಕಾಶಪ್ಪನವರ, ಬಿಜೆಪಿ ಗ್ರಾಮಾಂತರ ಜಿಲ್ಲೆಯ ಸಾಮಾಜಿಕ ಜಾಲತಾಣದ ಸದಸ್ಯರಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕುಂದಗೋಳ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕುಂದಗೋಳದಲ್ಲಿ ಹಾಲಿನ ಅಂಗಡಿ ಇಟ್ಟುಕೊಂಡಿರುವ ಸಾಗರ್, ಬೇರೆ ಕಡೆಯಿಂದ ಖೋಟಾ ನೋಟು ತಂದು ಕುಂದಗೋಳ, ಸುತ್ತಮುತ್ತ ಚಲಾವಣೆ ಮಾಡುತ್ತಿದ್ದರು. ಹಾಲಿನ ವ್ಯಾಪಾರದ ಜತೆ ಖೋಟಾ ನೋಟು ದಂಧೆಯನ್ನೂ ನಡೆಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
Next Story





