Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಡ್ಡದಲ್ಲಿ ಬಿರುಕು: ಮಡಿಕೇರಿ-ಮಂಗಳೂರು...

ಗುಡ್ಡದಲ್ಲಿ ಬಿರುಕು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ9 Aug 2022 7:44 PM IST
share
ಗುಡ್ಡದಲ್ಲಿ ಬಿರುಕು: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ

ಮಡಿಕೇರಿ ಆ.9 : ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿತದೊಂದಿಗೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ.

ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ. ಅಲ್ಪಸ್ವಲ್ಪ ಕುಸಿತವೂ ಸಂಭವಿಸಿದೆ. ಮಳೆಯ ಪ್ರಮಾಣ ಹೆಚ್ಚಿದಲ್ಲಿ ಯಾವುದೇ ಕ್ಷಣದಲ್ಲೂ ಮಣ್ಣು ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.

ಮಹಾಮಳೆಯೊಂದಿಗೆ ಪ್ರಾಕೃತಿಕ ವಿಕೋಪಗಳು ಘಟಿಸಿದ 2018ನೇ ಸಾಲಿನಲ್ಲಿ ಈಗ ಬಿರುಕು ಬಿಟ್ಟಿರುವ ಬೆಟ್ಟ ಪ್ರದೇಶದಲ್ಲೆ ಭಾರೀ ಪ್ರಮಾಣದ ಭೂ ಕುಸಿತವುಂಟಾಗಿ, ರಾಷ್ಟ್ರೀಯ ಹೆದ್ದಾರಿ ಕುಸಿದು ಸಂಪರ್ಕ ಕಡಿತಗೊಂಡಿತ್ತು. ಇದೀಗ ಮತ್ತೆ ಇದೇ ಪ್ರದೇಶದ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿದೆ.

ಶಾಸಕ ಕೆ.ಜಿ.ಬೋಪಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿ ಬಳಿ ಮಣ್ಣು ಕುಸಿಯುವ ಸಾಧ್ಯತೆ ಇದ್ದು, ಈ ಸಂಬಂಧ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ವಿದ್ಯುತ್ ಮಾರ್ಗ ಬದಲಿಸಲಾಗುತ್ತಿದೆ ಎಂದರು.  

ಹೆದ್ದಾರಿಯಲ್ಲಿ ಮಣ್ಣು ಕುಸಿದರೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. 

 ಮಳೆಯ ನಡುವೆಯೂ ಸೆಸ್ಕ್ ಇಲಾಖೆಯ ಸಿಬ್ಬಂದಿಗಳು ವಿದ್ಯುತ್ ಮಾರ್ಗವನ್ನು ಬದಲಾಯಿಸಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್, ಹೆದ್ದಾರಿ ವಿಭಾಗದ ಸಹಾಯಕ ಎಂಜಿನಿಯರ್ ಮುರುಗೇಶ್ ಇತರರು ಇದ್ದರು. 

ಮಡಿಕೇರಿ- ಸಂಪಾಜೆ ರಸ್ತೆಯಲ್ಲಿ ಆ.9 ರಾತ್ರಿಯಿಂದ ಆ.10 ರ ಬೆಳಗ್ಗೆ 6.30 ರವರೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X