ಹರ್ ಘರ್ ತಿರಂಗಾ: ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಚಾಲನೆ

ಉಡುಪಿ, ಆ.9: ದೇಶದ ’ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಪ್ರಯುಕ್ತ ’ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖ ಎ.ಪುಂಡಲೀಕ ಕಾಮತ್ ಅವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಮಂಗಳವಾರ ಹಸ್ತಾಂತರಿಸಿದರು.
ಆ.13ರ ಮುಂಜಾನೆಯಿಂದ ಆ.15ರ ಸಂಜೆಯ ತನಕ ದೇವಸ್ಥಾನ, ಸಂಘ- ಸಂಸ್ಥೆಗಳು ಹಾಗೂ ಪ್ರತಿ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಶಾಸಕರು ಕೋರಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಮೇನೇಜಿಂಗ್ ಟ್ರಸ್ಟಿ ಪಿ.ವಿ.ಶೆಣೈ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್.ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರದೀಪ್ ರಾವ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಉಪಸ್ಥಿತರಿದ್ದರು.