ಶಿವಮೊಗ್ಗ: ಮನೆ ಗೋಡೆ ಕುಸಿದು ನಾಲ್ವರಿಗೆ ಗಾಯ
ಶಿವಮೊಗ್ಗ: ಭಾರೀ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಆಗಸವಳ್ಳಿ ಸಮೀಪದ ಗೌಳಿ ನಗರದಲ್ಲಿ ನಡೆದಿದೆ.
ಗೋಡೆ ಕುಸಿತದಿಂದ ಬೀಬಿ ಜಾನ್ ( 55), ಸಾಧಿಕ್ (6), ಉಮರ್ (7) ಹಾಗೂ ಅಬ್ದುಲ್ ಗಾಯಗೊಂಡವರು ಎಂದು ತಿಳಿದು ಬಂದಿದೆ.
ಗೌಳಿನಗರದ ಬೀಬಿ ಜಾನ್ ಕುಟುಂಬದವರು ಮನೆಯಲ್ಲಿ ಮಲಗಿದ್ದರು. ಮಂಗಳವಾರ ಬೆಳಗಿನ ಜಾವ ಮನೆ ಕುಸಿದಿದೆ.ಅಬ್ದುಲ್ ಎಂಬ ಯುವಕನ ಕಾಲು ಮೂಳೆ ಸಹ ಮುರಿದಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಕುಸಿತ ಸ್ಥಳ ಹಾಗೂ ಆಸ್ಪತ್ರೆಗೆ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Next Story