Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಮೃತ ಮಹೋತ್ಸವ ಸ್ವಾತಂತ್ರ್ಯವನ್ನು...

ಅಮೃತ ಮಹೋತ್ಸವ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಬಗ್ಗೆ ಚಿಂತಿಸುವ ಕ್ಷಣ: ಪ್ರೊ. ಯಡಪಡಿತ್ತಾಯ

ವಾರ್ತಾಭಾರತಿವಾರ್ತಾಭಾರತಿ10 Aug 2022 2:10 PM IST
share
ಅಮೃತ ಮಹೋತ್ಸವ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಬಗ್ಗೆ ಚಿಂತಿಸುವ ಕ್ಷಣ: ಪ್ರೊ. ಯಡಪಡಿತ್ತಾಯ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವವು ಇದಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ನೆನಪಿಕೊಳ್ಳುವ ಹಾಗೂ ಅಮೂಲ್ಯ  ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಕುರಿತು ಚಿಂತಿಸುವ ಕ್ಷಣ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ವಿವಿಧ ವಿಭಾಗಗಳ ಸಹಯೋಗದೊಂದಿಗೆ, ಆಝಾದಿ ಕ ಅಮೃತ್ ಮಹೋತ್ಸವದ ಭಾಗವಾಗಿ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆದ ‘ಕರಾವಳಿ ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಪುನರ್ ಮನನ’  ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತದ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿಕಾರಿ, ಅಹಿಂಸಾತ್ಮಕ, ಸಾಹಿತ್ಯಾತ್ಮಕ, ಸಮಾಜ ಸುಧಾರಣೆ, ಸಂತ- ಮಹನೀಯರ ಮಾರ್ಗದರ್ಶನ ಎಂಬ ಐದು ವಿಧದ ಹೋರಾಟವನ್ನು ಅವರು  ನೆನಪಿಸಿಕೊಂಡರು.

ತಮ್ಮ ದಿಕ್ಸೂಚಿ ಭಾಷಣದಲ್ಲಿ, ಗೋವಾ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥ  ಡಾ. ಎನ್ ಶ್ಯಾಮ್ ಭಟ್,  ಕರಾವಳಿಯ ಸಾಮಾಜಿಕ- ಧಾರ್ಮಿಕ ಸುಭಾರಣೆ, ರಾಜಕೀಯ ಜ್ಞಾನ, ರಾಷ್ಟ್ರೀಯವಾದ, ಶಿಕ್ಷಣ ಸಂಸ್ಥೆಗಳು, ಮುದ್ರಣ ಕಲೆ ಜೊತೆಗೆ ಹಲವರ ತ್ಯಾಗ ಕರಾವಳಿಯ ಸ್ವಾತಂತ್ರ್ಯ ಹೋರಾಟದ ಪ್ರಭಾವ ಬೀರಿದ  ಬಗೆಯನ್ನು ವಿವರಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ.ಎಂ.ಲೋಕೇಶ್ ಮುಖ್ಯ ಅತಿಥಿಯಾಗಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಕ್ಕೆ ತ್ಯಾಗ ಬಲಿದಾನದ ಜೊತೆಗೆ, ಸ್ವಾತಂತ್ರ್ಯ ಉಳಿಸಿಕೊಳ್ಳಲು ಬಲಿದಾನಗೈದ ಲಕ್ಷಾಂತರ ಯೋಧರನ್ನು ನೆನಪಿಸಿಕೊಳ್ಳಬೇಕು. ಭಾರತ ಒಂದು ಸ್ವತಂತ್ರ್ಯ ದೇಶವಾಗಿ ಉಳಿಯಲು ಅವರೂ ಕಾರಣ. ಇದೊಂದು ಆತ್ಮವಿಮರ್ಶೆ ಮಾಡಿಕೊಳ್ಳಲು, ಮುಂದಿನ ದಾರಿಯ ಬಗ್ಗೆ ಯೋಚಿಸಲು ಸಕಾಲ ಎಂದರು.

ಇತಿಹಾಸ ವಿಭಾಗದ ವಿದ್ಯಾರ್ಥಿಗಳಿಂದ ವಸ್ತುಪ್ರದರ್ಶನ ಏರ್ಪಡಿಸಲಾಗಿತ್ತು.  ಪ್ರಾಂಶುಪಾಲೆ ಡಾ.ಅನುಸೂಯ ರೈ ಅತಿಥಿಗಳನ್ನು ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಚಾಲಕ ಡಾ.ಜಯರಾಜ್ ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ಮತ್ತು ಪುರಾತತ್ವ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಕುಮಾರಸ್ವಾಮಿ ಎಂ ಕಾರ್ಯಕ್ರಮ ನಿರೂಪಿಸಿದರು. ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ  ಡಾ.ನಾಗರತ್ನ ಎನ್.ರಾವ್ ವಂದಿಸಿದರು.  ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಗಾಯತ್ರಿ ಎನ್.,   ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಸುಮಾ ಆರ್. ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಿನಯ್ ರಜತ್ ಡಿ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ನಾಗೇಶ್ ತಾಂತ್ರಿಕ ಸೆಷನ್‌ಗಳನ್ನು ನಡೆಸಿಕೊಟ್ಟರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ಬಿಹಾರದ ಪಾಟ್ನಾದ ಬರಹಗಾರ ಪ್ರೊ. ಇಂದು ಜುಂಜುನ್ವಾಲಾ ಸಮಾರೋಪ ಸಮಾರಂಭದ ಅತಿಥಿಯಾಗಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X