ಆ.12ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಮಂಗಳೂರು, ಆ.10: ದ.ಕ.ಜಿಲ್ಲೆಯ ೪ ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾನಗಳಿಗೆ ಆಸ್ಪದವಿಲ್ಲದೆ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಸೆ.144ರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story