Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಖಾಸಗಿ ಕಂಪೆನಿಗೆ 11 ಕೋಟಿ ರೂ.ಮೌಲ್ಯದ...

ಖಾಸಗಿ ಕಂಪೆನಿಗೆ 11 ಕೋಟಿ ರೂ.ಮೌಲ್ಯದ ಜಮೀನು ಮಂಜೂರಾತಿಗೆ ಸಿದ್ಧತೆ

ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಿದ ಕಂದಾಯ ಇಲಾಖೆ

ಜಿ.ಮಹಾಂತೇಶ್ಜಿ.ಮಹಾಂತೇಶ್11 Aug 2022 8:42 AM IST
share
ಖಾಸಗಿ ಕಂಪೆನಿಗೆ 11 ಕೋಟಿ ರೂ.ಮೌಲ್ಯದ ಜಮೀನು ಮಂಜೂರಾತಿಗೆ ಸಿದ್ಧತೆ

ಬೆಂಗಳೂರು: ಸರಕಾರಿ ಕೆರೆ, ಕಟ್ಟೆ ಕುಂಟೆ, ಮತ್ತು ಹಳ್ಳ ಸೇರಿದಂತೆ ಜಲಮೂಲ ಪ್ರದೇಶಗಳನ್ನು ಸಂರಕ್ಷಿಸಬೇಕಾದ ಸರಕಾರ ಇದೀಗ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್. ಪುರ ಹೋಬಳಿಯಲ್ಲಿ   ಖಾಸಗಿ ಕಂಪೆನಿಯೊಂದಕ್ಕೆ 11 ಕೋಟಿ ರೂ. ಬೆಲೆ ಬಾಳುವ  0-01.08 ಗುಂಟೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಲು ಹೊರಟಿರುವುದು ಇದೀಗ ಬಹಿರಂಗವಾಗಿದೆ.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಪ್ರತಿನಿಧಿಸುತ್ತಿರುವ ಕೆ.ಆರ್.ಪುರಂ ವಿಧಾನಸಭೆ ಕ್ಷೇತ್ರದಲ್ಲಿರುವ ಭರೂಕಾ ಪಾರ್ಕ್ ಪ್ರೈ ಲಿ.ಗೆ ಹಳ್ಳ ಹಾದು ಹೋಗಿರುವ ಜಮೀನನ್ನು ಮಂಜೂರು ಮಾಡಲು ಕಂದಾಯ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವ (ಸಂಖ್ಯೆ: ಆರ್‌ಡಿ 292 ಎಲ್‌ಜಿಬಿ 2021 (ಇ) 2022) ಸಲ್ಲಿಸಿದೆ. ಇದರ ಪ್ರತಿಯು ' the-file.in'ಗೆ ಲಭ್ಯವಾಗಿದೆ.

ಪ್ರಸ್ತಾಪಿತ ಜಮೀನು ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಾರಣ ಯಾವುದೇ ಖಾಸಗಿ ಸಂಘ, ಸಂಸ್ಥೆ, ವ್ಯಕ್ತಿಗಳಿಗೆ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ. ಅಲ್ಲದೇ 2018ರ ಜೂ. 14ರಂದು ಹೊರಡಿಸಿರುವ ಸರಕಾರದ ಸುತ್ತೋಲೆ ಪ್ರಕಾರ ಸರಕಾರಿ ಕೆರೆ, ಕುಂಟೆ, ಹಳ್ಳ, ಜಲಮೂಲ ಪ್ರದೇಶಗಳನ್ನು ಸಂರಕ್ಷಿಸಬೇಕು. ಆದರೆ, ಖರಾಬು ಪ್ರದೇಶವು ಹಳ್ಳದ ಅಸ್ತಿತ್ವ ಕಳೆದುಕೊಂಡಿದೆ ಎಂಬುದನ್ನೇ ನೆಪವಾಗಿರಿಸಿಕೊಂಡಿರುವ ಸರಕಾರವು  ಅಂದಾಜು 10ರಿಂದ 11 ಕೋಟಿ ರೂ. ಬೆಲೆಬಾಳುವ ಜಾಗವನ್ನು ಭರೂಕಾ ಪಾರ್ಕ್ ಪ್ರೈ ಲಿ.ಗೆ ಮಂಜೂರು ಮಾಡಲು ಹೊರಟಿರುವುದು ಸಚಿವ ಸಂಪುಟಕ್ಕೆ ಸಲ್ಲಿಸಿರುವ ಪ್ರಸ್ತಾವ ಪ್ರತಿಯಿಂದ ತಿಳಿದು ಬಂದಿದೆ.  ಈ ಜಮೀನಿನ ಮಾರುಕಟ್ಟೆ ಬೆಲೆಯು ಎಕರೆಯೊಂದಕ್ಕೆ 10ರಿಂದ 11 ಕೋಟಿ ರೂ.ಗಳಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಂದಾಯ ಇಲಾಖೆಗೆ ವರದಿ ಮಾಡಿದ್ದಾರೆ.

ಭೂ ಮಂಜೂರಾತಿ ನಿಯಮಗಳಲ್ಲಿ ಹಳ್ಳವನ್ನು ಮಂಜೂರು ಮಾಡಲು ಯಾವುದೇ ಅವಕಾಶಗಳಿಲ್ಲದಿದ್ದರೂ ಕಂದಾಯ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಿರುವುದು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲವೆಂದು ಸ್ಪಷ್ಟವಾಗಿ ಕಂದಾಯ ದಾಖಲಾತಿಗಳಲ್ಲಿ ಉಲ್ಲೇಖಿಸಿದ್ದರೂ ಪ್ರಸ್ತಾವವನ್ನು ಇಲಾಖಾ ಹಂತದಲ್ಲೇ ತಿರಸ್ಕರಿಸಬೇಕಿತ್ತು. ಆದರೆ, ಕಂದಾಯ ಇಲಾಖೆಯ ಸಚಿವರ ಅನುಮೋದನೆ ಮೇರೆಗೆ ಮಂಜೂರಾತಿ ಪ್ರಸ್ತಾವವನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿದೆ ಎಂದು ಗೊತ್ತಾಗಿದೆ.

ಇದೇ ಪ್ರಸ್ತಾವದಲ್ಲಿ ಪ್ರಸ್ತಾಪಿತ ಬೆಂಗಳೂರು ಪೂರ್ವ ತಾಲೂಕು ಕೆ.ಆರ್. ಪುರ ಹೋಬಳಿಯ ಹೂಡಿ ಗ್ರಾಮದ ಸರ್ವೇ ನಂಬರ್ 31ರಲ್ಲಿನ 0-01.08 ಗುಂಟೆ ಸರವು ಜಮೀನಾಗಿರುವುದರಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳೂ, 1969ರ ನಿಯಮ 27ರ ಅನ್ವಯ ಸರಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿಯಮ 22ಎ(2)ನ್ನು ಸಡಿಲಿಸಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 68(1) ಮತ್ತು 68(5) ರಡಿ ಸಾರ್ವಜನಿಕ ಹಕ್ಕಿನಿಂದ ವಿಹಿತಗೊಳಿಸುವ ಷರತ್ತುಗೊಳಪಡಿಸಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22-2 ಎ ಅನ್ವಯ ಪ್ರಚಲಿತ ಮಾರುಕಟ್ಟೆ ದರ ಹಾಗೂ ಇತರ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಮಂಜೂರು ಮಾಡಬಹುದು’ ಎಂದು ಸರಕಾರದ ವಿವೇಚನೆಗೆ ಬಿಟ್ಟಿರುವುದು ಗೊತ್ತಾಗಿದೆ. ಇನ್ಫೋಸಿಸ್ ಕಂಪೆನಿಯು ಸರ್ಜಾಪುರ ಹೋಬಳಿಯಲ್ಲಿ  ಖರೀದಿಸಿದ್ದ ಜಮೀನಿನಲ್ಲಿಯೂ ಹದ್ದಿಗಿಡಿದ ಹಳ್ಳ ಹಾದು ಹೋಗಿತ್ತು. ಹೀಗಾಗಿ ಹಿಂದಿನ ಸರಕಾರವು ಬದಲಿ ಜಮೀನು ಪಡೆದುಕೊಂಡು ಕಂಪೆನಿ ಹಿತ ಕಾಯ್ದಿದ್ದನ್ನು ಸ್ಮರಿಸಬಹುದು.

‘ಪ್ರಸ್ತಾಪಿತ ಬೆಂಗಳೂರು ಪೂರ್ವ ತಾಲೂಕು ಕೆ.ಆರ್. ಪುರ ಹೋಬಳಿಯಯ ಹೂಡಿ ಗ್ರಾಮದ ಸರ್ವೇ ನಂಬರ್ 31ರಲ್ಲಿ 12-26ಎಕರೆ ವಿಸ್ತಿರ್ಣದ ಜಮೀನಿನಲ್ಲಿ ಹಾದು ಹೋಗುತ್ತಿರುವ 0-01.08 ಗುಂಟೆ ಸರವು (ಹಳ್ಳ) ಜಮೀನಾಗಿರುವುದರಿಂದ ಭೂ ಮಂಜೂರಾತಿ ನಿಯಮಗಳಲ್ಲಿ ಮಂಜೂರು ಮಾಡಲು ಅವಕಾಶವಿರುವುದಿಲ್ಲ. ಆದ್ದರಿಂದ ಪ್ರಸ್ತಾವವನ್ನು ತಿರಸ್ಕರಿಸಬಹುದು’ ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X