ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್
ಲೋಕಾಯುಕ್ತಕ್ಕೆ ವರ್ಗಾಯಿಸಲು ಆದೇಶ

ಬೆಂಗಳೂರು, ಆ.11: ಭ್ರಷ್ಟಾಚಾರ ನಿಗ್ರಹ ದಳದ ರಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ಗುರುವಾರ ಎಸಿಬಿ ರಚನೆಯನ್ನೇ ರದ್ದು ಮಾಡಿ, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶಿಸಿದೆ.
ಈ ಸಂಬಂಧ ಬೆಂಗಳೂರು ವಕೀಲರ ಸಂಘ, ಚಿದಾನಂದ ಅರಸ್, ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾ.ಕೆ.ಎಸ್.ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.
ಎಸಿಬಿಯಲ್ಲಿ ಬಾಕಿ ಇರುವ ಎಲ್ಲ ಕೇಸ್‌ಗಳನ್ನೂ ಈ ಕೂಡಲೇ ಲೋಕಾಯುಕ್ತಕ್ಕೆ ವರ್ಗಾಯಿಸಬೇಕೆಂದು ನ್ಯಾಯಪೀಠವು ತಿಳಿಸಿದೆ. ಜತೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟ ಪೀಠ, ಭ್ರಷ್ಟಾಚಾರ ನಿಗ್ರಹ ದಳಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನವನ್ನು ರದ್ದುಪಡಿಸಿದೆ. ಲೋಕಾಯುಕ್ತ ಪೊಲೀಸ್ ಠಾಣೆಯ ಸ್ಥಾನಮಾನವನ್ನು ಮರು ಸ್ಥಾಪಿಸಿದೆ.
Next Story