Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೋವಿಡ್ ಲಸಿಕೆಯ 3ನೇ ಡೋಸ್...

ರಾಜ್ಯದಲ್ಲಿ ಕೋವಿಡ್ ಲಸಿಕೆಯ 3ನೇ ಡೋಸ್ ಪಡೆದವರು ಶೇ.17ರಷ್ಟು ಮಾತ್ರ: ಸಚಿವ ಡಾ.ಕೆ.ಸುಧಾಕರ್

‘ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ' ► 'ಮಾಸ್ಕ್ ಧರಿಸುವುದು ಕಡ್ಡಾಯ'

ವಾರ್ತಾಭಾರತಿವಾರ್ತಾಭಾರತಿ11 Aug 2022 8:21 PM IST
share
ರಾಜ್ಯದಲ್ಲಿ ಕೋವಿಡ್ ಲಸಿಕೆಯ 3ನೇ ಡೋಸ್ ಪಡೆದವರು ಶೇ.17ರಷ್ಟು ಮಾತ್ರ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಆ. 11: ‘ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಲಸಿಕೆಯನ್ನು ಶೇ.17ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು' ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಮನವಿ ಮಾಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲ ಹಾಗೂ ಎರಡನೆ ಡೋಸ್ ಲಸಿಕಾಕರಣ ಪ್ರಮಾಣ ಶೇ.100ರಷ್ಟು ದಾಟಿದ್ದರೂ, ಮೂರನೆ ಡೋಸ್‍ನ ಲಸಿಕಾಕರಣ ಶೇ.17ರಷ್ಟು ಮಾತ್ರ ಆಗಿದೆ. ಪ್ರಧಾನಿ ಮೋದಿಯವರು 3ನೆ ಡೋಸ್ ಉಚಿತವಾಗಿ ನೀಡಲು ಕ್ರಮ ವಹಿಸಿದ್ದಾರೆ. ಆದರೂ, ಈ ಡೋಸ್ ಪಡೆದವರ ಪ್ರಮಾಣ ಕಡಿಮೆ ಇದೆ' ಎಂದು ಹೇಳಿದರು.

‘ಲಕ್ಷಾಂತರ ಲಸಿಕೆ ಡೋಸ್ ಲಭ್ಯವಿದ್ದರೂ ಜನರು ಮುಂದೆ ಬಾರದಿರುವುದು ಬೇಸರ ತಂದಿದೆ. ಲಸಿಕೆ ಪಡೆದವರಲ್ಲಿ ಆರೇಳು ತಿಂಗಳ ನಂತರ ರೋಗ ನಿರೋಧಕ ಶಕ್ತಿ ಕ್ಷೀಣಿಸುವುದರಿಂದ ಮೂರನೆ ಡೋಸ್ ನೀಡಲಾಗುತ್ತಿದೆ. ಮೂರನೇ ಡೋಸ್ ಪಡೆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗುವುದಿಲ್ಲ' ಎಂದು ಅವರು ತಿಳಿಸಿದರು.

‘ರಾಜ್ಯದಲ್ಲಿ ಈ ತಿಂಗಳ 10ರವರೆಗೂ 24 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು 60 ವರ್ಷ ವಯಸ್ಸು ಮೇಲ್ಪಟ್ಟವರಾಗಿದ್ದಾರೆ. ಯುವಜನರು ಲಸಿಕೆ ಪಡೆಯುವುದರೊಂದಿಗೆ ತಮ್ಮ ಮನೆಯ ಹಿರಿಯರಿಗೂ ಕೊಡಿಸಬೇಕು. ರಾಜ್ಯದಲ್ಲಿ ಶೇ.7.2ರಷ್ಟು ಕೋವಿಡ್ ಪಾಸಿಟಿವಿಟಿ ದರ ಇದೆ. ಆದರೆ, ಕೆಲ ಜಿಲ್ಲೆಗಳಲ್ಲಿ ರಾಜ್ಯದ ಪಾಸಿಟಿವಿಟಿ ದರಕ್ಕಿಂತ ಹೆಚ್ಚು ದರ ದಾಖಲಾಗಿದೆ. ಧಾರವಾಡದಲ್ಲಿ ಅತಿಹೆಚ್ಚು ದಾಖಲಾಗಿದೆ. ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಯಂತೆ, ರೋಗ ಲಕ್ಷಣ ಇರುವವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಮಂಕಿ ಪಾಕ್ಸ್: ‘ದೇಶದಲ್ಲಿ ಈವರೆಗೆ 9 ಮಂಕಿ ಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಆದರೆ ರಾಜ್ಯದಲ್ಲಿ ಈವರೆಗೂ ಪ್ರಕರಣ ಕಂಡುಬಂದಿಲ್ಲ. ಆದರೂ ಗಡಿ ಭಾಗದ ಐದಾರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಅದಕ್ಕೆ ಬೇಕಾದ ಔಷಧಿ, ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚು ಮಳೆಯಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಕಳೆದ ವರ್ಷ ಇದೇ ಸಮಯದಲ್ಲಿ 419 ಮಲೇರಿಯಾ ಪ್ರಕರಣ ಕಂಡುಬಂದರೆ, ಈ ಬಾರಿ 114 ಕಂಡುಬಂದಿದೆ. ಇದು ಕಡಿಮೆ ಪ್ರಮಾಣದಲ್ಲಿದೆ. ಆದರೆ, ಕಳೆದ ವರ್ಷ 1,266 ಡೆಂಗಿ ಪ್ರಕರಣ ಕಂಡುಬಂದಿದ್ದು, ಈ ವರ್ಷ 4,405 ಆಗಿದೆ. ಹಾಗೆಯೇ, ಈ ಬಾರಿ ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣ ಹೆಚ್ಚಿದೆ. ಕಳೆದ ವರ್ಷ ಚಿಕೂನ್‍ಗುನ್ಯಾ ಪ್ರಕರಣ 454 ಇದ್ದು, ಈ ಬಾರಿ 978 ಆಗಿದೆ. ಎಚ್1ಎನ್1 ಕಳೆದ ವರ್ಷ 3 ಇದ್ದು, ಈ ಬಾರಿ 345 ಆಗಿದೆ ಎಂದು ಅವರು ಮಾಹಿತಿ ನೀಡಿದರು.

ಡೆತ್ ಆಡಿಟ್: ತುಮಕೂರು, ಧಾರವಾಡ, ಬೆಂಗಳೂರಿನಲ್ಲಿ 16, 21 ವರ್ಷ ವಯಸ್ಸಿನವರು ಕೋವಿಡ್ ಸೋಂಕಿಗೊಳಗಾಗಿ ಮೃತಪಟ್ಟಿದ್ದಾರೆ. ಇದು ಬಹಳ ದುರದೃಷ್ಟಕರವಾಗಿದ್ದು, ಅವರ ಡೆತ್ ಆಡಿಟ್ ನಡೆಸಲಾಗುತ್ತಿದೆ ಎಂದು ಅವರು, ‘ಕೋರ್ಬಿವ್ಯಾಕ್ಸ್' ಎಂಬ ಹೊಸ ಲಸಿಕೆಯನ್ನು ಹೈದರಾಬಾದ್ ಸಂಸ್ಥೆ ಆವಿಷ್ಕಾರ ಮಾಡಿದ್ದು, ಅದಕ್ಕೆ ಪರವಾನಿಗೆ ದೊರೆತಿದೆ. ಮೂರನೆ ಡೋಸ್ ಆಗಿ ಕೋರ್ಬಿವ್ಯಾಕ್ಸ್ ಪಡೆಯಲು ನಾಳೆಯಿಂದ ಅವಕಾಶವಿದೆ. 60 ವರ್ಷ ವಯಸ್ಸು ಮೇಲ್ಪಟ್ಟವರು, ಕೋಮಾರ್ಬಿಡಿಟಿ ಇರುವವರು ಕಡ್ಡಾಯವಾಗಿ 3ನೆ ಡೋಸ್ ಪಡೆಯಬೇಕು' ಎಂದು ಕೋರಿದರು.

''ಮಾಸ್ಕ್ ಧರಿಸುವುದು ಕಡ್ಡಾಯ:''

‘ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ನಿರಾಕರಿಸುವ ಬಗ್ಗೆ ದೂರು ಬಂದಿದೆ. ಇದು ಅಮಾನವೀಯ ನಡೆ. ಇಂತಹ ಪ್ರಕರಣ ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮ ವಹಿಸಲಾಗುವುದು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸದ್ಯಕ್ಕೆ ದಂಡ ವಿಧಿಸುವ ಪ್ರಸ್ತಾಪ ಇಲ್ಲ. ಪರಿಸ್ಥಿತಿ ನೋಡಿಕೊಂಡು ಮತ್ತೆ ಸಭೆ ನಡೆಸಿ ಚರ್ಚಿಸಲಾಗುವುದು. ಮಾಸ್ಕ್ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿದೆ. ಎಲ್ಲರೂ ಮಾಸ್ಕ್ ಧರಿಸುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ ಚಟುವಟಿಕೆಗಳನ್ನು ನಿಯಂತ್ರಿಸುವ ಪ್ರಸ್ತಾಪ ಸರಕಾರದ ಮುಂದೆ ಇಲ್ಲ'

-ಡಾ.ಕೆ.ಸುಧಾಕರ್ ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X