Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಲೆಯಾದ ಫಾಝಿಲ್, ಮಸೂದ್ ಕುಟುಂಬಕ್ಕೆ...

ಕೊಲೆಯಾದ ಫಾಝಿಲ್, ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

► "ಅನುಮತಿ ಇಲ್ಲದ ಕಾರಣ ಪ್ರವೀಣ್ ಮನೆಗೆ ಭೇಟಿ ನೀಡಲು ಆಗಲ್ಲ" ► ಮಗನ ಹೆಸರಿನಲ್ಲಿ ಟ್ರಸ್ಟ್ ಮಾಡಿ ಸಮಾಜ ಸೇವೆ: ಫಾಝಿಲ್ ತಂದೆ

ವಾರ್ತಾಭಾರತಿವಾರ್ತಾಭಾರತಿ11 Aug 2022 9:52 PM IST
share
ಕೊಲೆಯಾದ ಫಾಝಿಲ್, ಮಸೂದ್ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಸುರತ್ಕಲ್, ಆ.11: ಇತ್ತೀಚೆಗೆ ಹಂತಕರಿಂದ ಹತ್ಯೆಗೀಡಾಗಿದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ನಿವಾಸಕ್ಕೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನಿಯೋಗ ಭೇಟಿ ನೀಡಿ ಸಾಂತ್ವನದ ಜೊತೆಗೆ 30 ಲಕ್ಷ ರೂಪಾಯಿ ಮೌಲ್ಯದ ಸಹಾಯಧನದ‌ ಚೆಕ್ ವಿತರಿಸಿತು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಮಸೂದ್, ಫಾಝಿಲ್ ಅವರ ಸಹೋದರ ಏಳನೇ ತರಗತಿಯಲ್ಲಿ ಕಲಿಯುತ್ತಿದ್ದು, ಮನೆಯವರು ಅನುವು ಮಾಡಿಕೊಟ್ಟರೆ ಆತ ಐಪಿಎಸ್ ಕಲಿಯಲು ಬಯಸಿದರೂ ಆತನ ವಿದ್ಯಾಭ್ಯಾಸಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿ ನೆರವು ನೀಡಲಿದೆ ಎಂದರು.

ಸರಕಾರ ಬೆಳ್ಳಾರೆಯ  ಪ್ರವೀಣ್ ಅವರ ಮನೆಗೆ ಮಾತ್ರ ಭೇಟಿ ನೀಡಿ ಪರಿಹಾರ ನೀಡಿ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ಪರಿಹಾರ ನೀಡಲು ತಾರತಮ್ಯ ಎಸಗಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಸರಕಾರ ಪರಿಹಾರ ನೀಡುವುದು ಯಾರ ಹಣದಿಂದ ಎಂದು ಸರಕಾರವನ್ನು ಪ್ರಶ್ನೆ ಮಾಡಿದರು. ಅದು ಪರಿಹಾರ ನೀಡುವುದು ಬಡವರು, ಬೀಡಿ ಕಟ್ಟುವವರ ಹಣ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ಫಾಝಿಲ್ ಮನೆಗೆ ಭೇಟಿ ನೀಡಿ ಪರಿಹಾರ ಧನವನ್ನು ವಿತರಿಸಬೇಕಿತ್ತು.  ಆದರೆ, ಇನ್ನೂ ಸರಕಾರ ವಿತರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಮುಸ್ಲಿಂ ಸೆಂಟ್ರಲ್ ಕಮಿಟಿ ಹೇಳಿದಂತೆ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ಧನವನ್ನು ವಿತರಿಸಿದೆ ಎಂದರು.

ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ. ಎಸ್. ಮುಹಮ್ಮದ್ ಮಸೂದ್ , ಉಪಾಧ್ಯಕ್ಷರಾದ ಹಾಜಿ ಸಿ. ಮಹಮೂದ್, ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಜ್ ಅಲಿ, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಹಾಜಿ ಹನೀಫ್ ಇದ್ದರು. 

ಈ ಸಂದರ್ಭ ಮಂಗಳಪೇಟೆ ಜುಮಾ ಮಸೀದಿಯ ಅಧ್ಯಕ್ಷ ಹಸನಬ್ಬ, ಮಂಗಳಪೇಟೆ  ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಶಫೀಕ್,  ಬದ್ರಿಯಾ ಜುಮಾ ಮಸೀದಿಯ ಖತೀಬ್ ಉಮರ್ ಫಾರೂಕ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.

ಮಗನ ಹೆಸರಿನಲ್ಲಿ ಟ್ರಸ್ಟ್ ಮಾಡಿ ಸಮಾಜ ಸೇವೆ: ಫಾಝಿಲ್ ತಂದೆ
ಪರಿಹಾರ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೊಲೆಯಾದ ಫಾಝಿಲ್ ಅವರ ತಂದೆ ಉಮರ್ ಫಾರೂಕ್‌ ಅವರು, ನನ್ನ ಮಗ ಫಾಝಿಲ್ ರಕ್ತದಾನದಂತಹ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪರಿಹಾರದಿಂದ ಫಾಝಿಲ್ ನ ಹೆಸರಿನಲ್ಲಿ ಟ್ರಸ್ಟ್ ವೊಂದನ್ನು ತೆರೆಯಲಾಗುವುದು. ಆ ಮೂಲಕ ಫಾಝಿಲ್ ನ ಹೆಸರಿನಲ್ಲಿ ಸಮಾಜ ಸೇವೆ ಮಾಡಲಾಗುವುದು ಎಂದು ನುಡಿದರು.

ಪ್ರವೀಣ್ ಮನೆಯವರು ಒಪ್ಪಿದರೆ ಅವರಿಗೂ ಪರಿಹಾರ ನೀಡಲು ಸಿದ್ಧ

ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಭೇಟಿ ನೀಡದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಅವರು, ಪ್ರವೀಣ್ ಮನೆಗೂ ಭೇಟಿ ನೀಡಿ ಸಾಂತ್ವನ ಹೇಳುವ ಜೊತೆಗೆ 10 ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ನಮ್ಮ ಭೇಟಿಯ ಕುರಿತು ಕುಟುಂಬಸ್ಥರಿಗೆ ಅಸಮಾಧಾನ ಇರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿಲ್ಲ. ಮನೆಯವರು ಭೇಟಿ ನೀಡಲು ಅವಕಾಶ ಮಾಡಿ ಕೊಟ್ಟರೆ ಖಂಡಿತವಾಗಿಯೂ ಭೇಟಿ ನೀಡಿ ಸಾಂತ್ವನದ ಜೊತೆಗೆ ಪರಿಹಾರವನ್ನೂ ವಿತರಿಸಲಾಗುವುದು ಎಂದು ಮಸೂದ್ ಸ್ಪಷ್ಟ ಪಡಿಸಿದರು.

ಈ ಸಂದರ್ಭ ಪುತ್ತು ಬಾವ, ಸಿಎಂ ಹನೀಫ್, ಅಬ್ದುಲ್ ಮಜೀದ್‌ ಸಿತಾರ್, ಅಬ್ದುಲ್ ಖಾದರ್ ವಿಟ್ಲ, ರಿಯಾಝುದ್ದೀನ್, ಬಿ. ಎಸ್‌ ಇಮ್ತಿಯಾಝ್, ಅಬ್ದುಲ್ ಲತೀಫ್, ಸುರತ್ಕಲ್ ಐಕ್ಯತಾ ವೇದಿಕೆಯ ಅಶ್ರಫ್, ಶರೀಫ್,  ಅಬ್ದುಲ್ ಜಲೀಲ್, ಫಾರೂಕ್, ಹನೀಫ್ ಪಾಜೆಪಲ್ಲ,  ಹನೀಫ್, ಸ್ಥಳೀಯ ಮಸೀದಿ ಅಧ್ಯಕ್ಷ  ಹಸನಬ್ಬ, ಶಮೀರ್ ಕಾಟಿಪಳ್ಳ, ಸರ್ಫರಾಝ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X