ಆ.13ರಿಂದ ಆ.15ವರೆಗೆ ಲಾಲ್‍ಬಾಗ್‍ಗೆ ಮೆಟ್ರೋ ಟಿಕೆಟ್ ದರದಲ್ಲಿ ರಿಯಾಯಿತಿ

ಬೆಂಗಳೂರು, ಆ.12: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಲಾಲ್‍ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ಕೊಡುವ ಮೆಟ್ರೋ ಪ್ರಯಾಣಿಕರಿಗೆ ಇಂದಿನಿಂದ (ಆ.13) ಆ.15ರವರೆಗೂ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಲಾಗಿದೆ.
ಮೂರು ದಿನಗಳವರೆಗೂ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‍ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು ರೂ.30ಗೆ ನಿಗದಿಪಡಿಸಲಾಗಿದೆ.
ಹಾಗೆಯೇ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮೂರು ದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೇಪರ್ ಟಿಕೆಟ್‍ಗಳನ್ನು ಖರೀದಿಸಬಹುದಾಗಿದೆ. ಲಾಲ್‍ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ. ಎಲ್ಲ ಮೆಟ್ರೋ ಪ್ರಯಾಣಿಕರು ತ್ವರಿತ ಪ್ರಯಾಣಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‍ಗಳನ್ನು ಬಳಸಬಹುದು. ಲಾಲ್‍ಬಾಗ್ ನಿಲ್ದಾಣದಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‍ನ್ನು ಹಾಜರುಪಡಿಸಬೇಕು ಎಂದು ಪ್ರಕಟಣೆ ತಿಳಿಸಿದೆ.