Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ...

ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ವಾರ್ತಾಭಾರತಿವಾರ್ತಾಭಾರತಿ13 Aug 2022 1:57 PM IST
share
ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು, ಆ.13: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಶನಿವಾರ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು | 'ಮನೆ ಮನೆಯಲ್ಲಿ ತ್ರಿವರ್ಣ ಧ್ವಜ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಆ.15ರ ಬೆಳಗ್ಗೆ 8:45ಕ್ಕೆ ಮುಖ್ಯಮಂತ್ರಿ ಮೈದಾನದಕ್ಕೆ ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಅವರು  ತೆರೆದ  ಜೀಪಿನಲ್ಲಿ  ಪೆರೇಡ್  ಪರಿವೀಕ್ಷಣೆ ಮತ್ತು ಗೌರವ  ರಕ್ಷೆ ಸ್ವೀಕರಿಸಿ  ನಾಡಿನ ಜನತೆಗೆ  ಸ್ವಾತಂತ್ರ್ಯೋತ್ಸವದ ಸಂದೇಶ  ನೀಡಲಿದ್ದಾರೆ ಎಂದು ತಿಳಿಸಿದರು.

ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್ , ಬಿ.ಎಸ್.ಎಫ್, ಸಿ.ಎ.ಆರ್, ಕೆ.ಎಸ್.ಐ.ಎಸ್.ಎಫ್,  ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಆಗ್ನಿಶಾಮಕ  ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ನ ಒಟ್ಟು 36 ತುಕಡಿಗಳಲ್ಲಿ ಸುಮಾರು 1,200 ಮಂದಿ  ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಿಕ್ಕೇರಿ ಕೃಷ್ಣಮೂರ್ತಿ ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ,  ಬೆಂಗಳೂರು  ಉತ್ತರ ಜಿಲ್ಲೆಯ ಚಿಕ್ಕಬಿದರಕಲ್ಲು ಸರ್ಕಾರಿ ಫ್ರೌಡಶಾಲೆಯ 800 ಮಕ್ಕಳು ‘ಅಮೃತ  ಮಹೋತ್ಸವದ ಭಾರತದ ಸಂಭ್ರಮದ’ ನೃತ್ಯ ಪ್ರದರ್ಶಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ  ಹೇರೋಹಳ್ಳಿ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 800 ಮಕ್ಕಳು ‘ಈಸೂರು ಹೋರಾಟ' ಹಾಗೂ ಗುರಪ್ಪನಪಾಳ್ಯದ ಲಿಲ್ಲಿ ರೋಸ್ ಪ್ರೌಢಶಾಲೆಯ 850 ಮಕ್ಕಳು ‘ಜೈ ಜವಾನ್ ಜೈ ಕಿಸಾನ್' ಕಾರ್ಯಕ್ರಮ ನಡೆಸಿಕೊಳ್ಳಲಿದ್ದಾರೆ ಹಾಗೂ ಎಂ. ಇ. ಜಿ ತಂಡದವರು  ಟೆಂಟ್ ಪೆಗ್ಗಿಂಗ್, ಕೊಂಬ್ಯಾಟ್ ಫ್ರೀ ಫಾಲ್ ಮತ್ತು ಉತ್ತಮ ದೇಹದಾರ್ಢ್ಯ ಸಹಾಸ ಪ್ರದರ್ಶನವನ್ನು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರ ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಾರಿ ಸಾರ್ವಜನಿಕರಿಗಾಗಿ ಇರುವ ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.

ಬೆಂಗಳೂರು ನಗರದ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್  ಕೈಗೊಳ್ಳಲಾಗಿದೆ. 1,700 ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. 9 ಡಿ.ಸಿ.ಪಿ.,10 ಕೆ.ಎಸ್.ಆರ್.ಪಿ. ತುಕಡಿಗಳು ಹಾಗೂ  ಕಿರಿಯ ಅಧಿಕಾರಿಗಳನ್ನು ಭದ್ರತ ವ್ಯವಸ್ಥೆಗೆ ನಿಯೋಜಿಸಲಾಗಿದೆ ಎಂದರು.

 ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿಟಿವಿ ಕ್ಯಾಮರಾ  ವ್ಯವಸ್ಥೆ ಹಾಗೂ ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು  ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು  ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್, ಸಂಚಾರ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X