Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ : ಪಡಿತರ ಅಕ್ಕಿ ಕಾಳಸಂತೆಯಲ್ಲಿ...

ಸಾಗರ : ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಯಲು ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Aug 2022 5:29 PM IST
share
ಸಾಗರ : ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಯಲು ಒತ್ತಾಯಿಸಿ ಪ್ರತಿಭಟನೆ

ಸಾಗರ : ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ತಾಲ್ಲೂಕು ಆಡಳಿತ ಸೂಕ್ತ ಕ್ರಮ ಜರುಗಿಸಬೇಕು. ಅಗತ್ಯ ಇಲ್ಲದವರ ಪಡಿತರ ಚೀಟಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಸ್ವಾಮಿನಾಥ್ ಹೊಸಂತೆ ಗ್ರಾಮದಿಂದ ತಹಶೀಲ್ದಾರ್ ಕಚೇರಿವರೆಗೆ ರಾಷ್ಟ್ರಧ್ವಜ ಹಿಡಿದು 20 ಕಿ.ಮೀ. ಪಾದಯಾತ್ರೆ ನಡೆಸಿ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ಅವರಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದರು.

ಇದೇ ಸಂದರ್ಭ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ಮನವಿ ಸ್ವೀಕರಿಸಿ ಸಾಮಾಜಿಕ ಕಾರ್ಯಕರ್ತ ಸ್ವಾಮಿನಾಥ್ ಅವರಿಗೆ ಹೊಸ ಅಂಗಿ ಕೊಡಿಸಿ, ಬಸ್ ಚಾರ್ಜ್‍ಗೆ ವೈಯಕ್ತಿಕ ಹಣ ನೀಡಿ ಮಾನವೀಯತೆ ಮೆರೆಯುವ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಸ್ವಾಮಿನಾಥ್ ಹೊಸಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡಜನರು ಹಸಿವಿನಿಂದ ಬಳಲಬಾರದು ಎಂದು ಪಡಿತರ ಅಕ್ಕಿಯನ್ನು ಉಚಿತವಾಗಿ ಕೊಡುತ್ತಿದೆ. ಆದರೆ ನಮ್ಮ ಮನೆಯಲ್ಲಿ ಸುಮಾರು ಒಂದು ಕ್ವಿಂಟಾಲ್‍ನಷ್ಟು ಪಡಿತರ ಅಕ್ಕಿಯನ್ನು ಬಡವರಿಗೆ ಕೊಡಲು ಸಂಗ್ರಹಿಸಿ ಇಡಲಾಗಿತ್ತು. ಆದರೆ ನನ್ನ ಪತ್ನಿ ನನಗೆ ಗೊತ್ತಿಲ್ಲದೆ ಅಕ್ಕಿಯನ್ನು ಕಾಳಸಂತೆಕೋರರಿಗೆ ಮಾರಾಟ ಮಾಡಿದ್ದಾರೆ. ಇದರಿಂದ ನನಗೆ ಬೇಸರವಾಗಿದೆ. ಈ ಹಿನ್ನೆಲೆಯಲ್ಲಿ ಅರೆಬೆತ್ತಲೆಯಾಗಿ 20 ಕಿ.ಮೀ. ಪಾದಯಾತ್ರೆ ನಡೆಸಿ ನನ್ನ ಪಡಿತರ ಚೀಟಿಯನ್ನು ರದ್ದುಮಾಡುವಂತೆ ಮನವಿ ಮಾಡಿದ್ದೇನೆ. ಜೊತೆಗೆ ತಾಲ್ಲೂಕಿನ ಬೇರೆಬೇರೆ ಭಾಗದಲ್ಲಿ ಇಂತಹ ಅವ್ಯವಹಾರ ನಡೆಯುತ್ತಿದೆ. ಅಗತ್ಯ ಇಲ್ಲದವರ ಪಡಿತರ ಚೀಟಿಯನ್ನು ರದ್ದುಮಾಡಬೇಕು. ಪಡಿತರ ಅಕ್ಕಿಯನ್ನು ಖರೀದಿ ಮಾಡುವ ರೈಸ್‍ಮಿಲ್, ಅಂಗಡಿಯವರ ಮೇಲೆ ದಾಳಿ ನಡೆಸಿ ಸೂಕ್ತಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್, ಸ್ವಾಮಿನಾಥ್ ಅವರ ಸಾಮಾಜಿಕ ಕಳಕಳಿ ಅನುಕರಣೀಯವಾಗಿದೆ. ಮನವಿಯಲ್ಲಿ ತಿಳಿಸಿರುವಂತೆ ನಾನು ಅವರ ಮನೆಗೆ ಹೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸುತ್ತೇನೆ. ಇದರ ಜೊತೆಗೆ ತಾಲ್ಲೂಕಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಯಾರಾದರೂ ಮಾರಾಟ ಮಾಡುವುದಾಗಲೀ, ಖರೀದಿ ಮಾಡುವುದಾಗಲಿ ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X