Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 60 ವರ್ಷ ತುಂಬಿದ ನೌಕರರನ್ನು ಕೆಲಸದಿಂದ...

60 ವರ್ಷ ತುಂಬಿದ ನೌಕರರನ್ನು ಕೆಲಸದಿಂದ ಬಿಡುಗಡೆ: ಸರ್ಕಾರದ ಆದೇಶದ ವಿರುದ್ಧ ನೌಕರರ ಧರಣಿ

''ಸೂಕ್ತ ರೀತಿಯಲ್ಲಿ ಆರ್ಥಿಕ ಭದ್ರತೆ ನೀಡಿ ಬಿಡುಗಡೆ ಮಾಡಲಿ''

ವಾರ್ತಾಭಾರತಿವಾರ್ತಾಭಾರತಿ16 Aug 2022 5:53 PM IST
share
60 ವರ್ಷ ತುಂಬಿದ ನೌಕರರನ್ನು ಕೆಲಸದಿಂದ ಬಿಡುಗಡೆ: ಸರ್ಕಾರದ ಆದೇಶದ ವಿರುದ್ಧ ನೌಕರರ ಧರಣಿ

ಬೆಂಗಳೂರು, ಆ.16: ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ 60 ವರ್ಷ ತುಂಬಿದ ನೌಕರರನ್ನು ಸರಕಾರ ಸೂಕ್ತ ರೀತಿಯಲ್ಲಿ ಆರ್ಥಿಕ ಭದ್ರತೆ ನೀಡಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿ ನೌಕರರು ಧರಣಿ ನಡೆಸಿದರು.

ಮಂಗಳವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಜಮಾಯಿಸಿದ ಮಹಿಳಾ ನೌಕರರು, 60 ವರ್ಷ ವಯಸ್ಸು ಆಗಿದೆ ಎಂದು ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಅವರಿಗೆ ನಿವೃತ್ತಿ ವೇತನ ಅಥವಾ ಇಡಿಗಂಟು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬಿಸಿಯೂಟದ ಕಾರ್ಯಕ್ರಮ 2002-03ನೆ ಸಾಲಿನಲ್ಲಿ ಅನುಷ್ಠಾನಗೊಂಡಿದೆ. ಅಂದಿನಿಂದಲೂ ಯಾವುದೇ ವಯಸ್ಸಿನ ನಿರ್ಬಂಧ ಇಲ್ಲದೆ ಅಡುಗೆ ಸಿಬ್ಬಂದಿ ಕನಿಷ್ಠ ಗೌರವಧನ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಆದರೆ, ಸರಕಾರ ಮಾ.5 ರಂದು 60 ವರ್ಷ ದಾಟಿದ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲು ಆದೇಶ ಹೊರಡಿಸಿತ್ತು. ಆದೇಶದಂತೆ ಇದೀಗ ಅಮಾನವೀಯವಾಗಿ ಮನೆಗೆ ಕಳುಹಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಪ್ರಾಥಮಿಕ ಶಾಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬಿಸಿಯೂಟ ನಂತರ ಪ್ರೌಢಶಾಲೆಗಳಿಗೂ ವಿಸ್ತರಿಸಲಾಯಿತು. ಸುಮಾರು 20 ವರ್ಷಗಳಿಂದ ಅಡುಗೆ ಕೆಲಸ ಮಾಡುತ್ತಿದ್ದರೂ ಯಾವುದೇ ಸೌಲಭ್ಯಗಳಿಲ್ಲ. 60 ವರ್ಷ ದಾಟಿದವರು ಪಿಂಚಣಿ ಅಥವಾ ಇಡಗಂಟು ಹಣ ಇಲ್ಲದೆ ಬರಿಗೈಲಿ ಮನೆಗೆ ಮರಳುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೆಲಸದಿಂದ ಬಿಡುಗಡೆಗೊಳಿಸುವಾಗ ಇಂತಿಷ್ಟು ಎಂದು ಗೌರವ ಮೊತ್ತ ನೀಡಬೇಕು. ಪ್ರಮುಖವಾಗಿ 1 ಲಕ್ಷ ರೂ.ನೀಡಬೇಕು. ಅಕ್ಷರದಾಸೋಹ ನೌಕರರಿಗೆ ಸೇವಾ ಭದ್ರತೆ ನೀಡಬೇಕು. ಕನಿಷ್ಠ ವೇತನ, ಪಿಂಚಣಿ, ಗ್ರಾಚ್ಯುಟಿ ನೀಡಬೇಕು ಎಂದು ಇದೇ ವೇಳೆ ನೌಕರರು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ವರಲಕ್ಷ್ಮೀ, 60 ವರ್ಷ ವಯಸ್ಸು ಆಗಿದೆ ಎಂದು ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಅವರಿಗೆ ನಿವೃತ್ತಿ ವೇತನ ಅಥವಾ ಇಡಿಗಂಟು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X