ಉಡುಪಿ; ಕೆಓಎಸ್ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ

ಉಡುಪಿ, ಆ.16: ಜಿಲ್ಲೆಯಲ್ಲಿ ಕರ್ನಾಟಕ ಮುಕ್ತ ಶಾಲೆ-ಕೆ.ಓ.ಎಸ್- ಪರೀಕ್ಷೆಗಳು ಆ.17ರಿಂದ 26ರವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೂ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡಲು, ಪರೀಕ್ಷೆಗಳು ಸುಸೂತ್ರ ವಾಗಿ ಮತ್ತು ದೋಷರಹಿತವಾಗಿ ನಡೆಯಲು ನಿಗದಿ ಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story