ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಹಾಕೆ ಅಕ್ಷಯ್ ಮಚ್ಚೀಂದ್ರ ನೇಮಕ

ಹಾಕೆ ಅಕ್ಷಯ್ ಮಚ್ಚೀಂದ್ರ
ಉಡುಪಿ, ಆ.16: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ್ಷರಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಮಂಗಳವಾರ ಆದೇಶಿಸಿದ್ದು, ಉಡುಪಿ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ ಎರಡೂವರೆ ವರ್ಷಗಳಿಂದ ಉಡುಪಿಯ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.ವಿಷ್ಣುವರ್ದನ್ ಅವರನ್ನು ಬೆಂಗಳೂರಿನ ಗುಪ್ತಚಾರ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಇವರಿಂದ ತೆರವಾದ ಹುದ್ದೆಗೆ ಕಳೆದ 10 ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾವಣೆಗೊಂಡಿದ್ದ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ.
Next Story