ಉಡುಪಿ ಜಿಲ್ಲೆಯ ರಜತ ಸಂಭ್ರಮಕ್ಕೆ ರಾಜ್ಯಪಾಲರ ಆಹ್ವಾನ

ಉಡುಪಿ, ಆ.16: ಉಡುಪಿ ಜಿಲ್ಲೆ ರಚನೆಯಾಗಿ ೨೫ ವರ್ಷಗಳಾದ ಹಿನ್ನೆಲೆ ಯಲ್ಲಿ ಉಡುಪಿ ಜಿಲ್ಲಾಡಳಿತ ಆ.25ರಂದು ಹಮ್ಮಿಕೊಂಡಿರುವ ಉಡುಪಿ ಜಿಲ್ಲೆ ರಜತ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಇಂದು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರೊಂದಿಗೆ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹಾಜರಿದ್ದರು.
Next Story