ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಅಭಿನಂದನೆ

ಉಡುಪಿ, ಆ.16: ಈ ಹಿಂದೆ ಉಡುಪಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಸಿ.ಎಂ.ಜೋಷಿ ಮತ್ತು ಕರ್ನಾಟಕ ಉಚ್ಛ ನ್ಯಾಯಾ ಲಯದ ರಿಜಿಸ್ಟ್ರಾರ್ ಜನರಲ್ ಆಗಿದ್ದ ಟಿ.ಜಿ.ಶಿವಶಂಕರೇ ಗೌಡ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಅವರನ್ನು ಉಡುಪಿ ವಕೀಲರ ಸಂಘದ ವತಿಯಿಂದ ಬೆಂಗಳೂರಿನ ರಾಜಭವನದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ್ ಶೆಟ್ಟಿ, ವಕೀಲ ಎಚ್.ಆನಂದ ಮಡಿವಾಳ, ಗಂಗಾಧರ ಎಚ್.ಎಂ ಉಪಸ್ಥಿತರಿದ್ದರು.
Next Story