ಮಂಗಳೂರು; ಸುಲಿಗೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು: ಮೂರು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಮೊಬೈಲ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಕರಿಂಜೆ ಗ್ರಾಮ ಬದ್ರಿಯಾ ಬೆಟ್ಟು ನಿವಾಸಿ ಜಗದೀಶ್ ಶೆಟ್ಟಿ ಯಾನೆ ರಾಜೇಶ್ ಯಾನೆ ಜಗ್ಗ ಜಗದೀಶ್ ಪೂಜಾರಿ (40) ಬಂಧಿತ ಆರೋಪಿ.
2019ರಲ್ಲಿ ನಗರರ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದ ಎಂದು ಆರೋಪಿಸಿ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಆದರೆ ಆರೋಪಿಯು ಪೊಲೀಸರ ಕೈಗೆ ಸಿಗದೆ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿಯ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಇದೀಗ ಮೂರು ವರ್ಷದ ಬಳಿಕ ಆರೋಪಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯ ವಿರುದ್ಧ ಕದ್ರಿ ಠಾಣೆಯಲ್ಲೂ ಕಳವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





