ಮಡಿಕೇರಿ | ಮಾಂದಲಪಟ್ಟಿಯಲ್ಲಿ ಪ್ರವಾಸಿಗರ ಮೇಲೆ ಗುಂಪಿನಿಂದ ಹಲ್ಲೆ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ

ಮಡಿಕೇರಿ ಆ.17: ಮಾಂದಲಪಟ್ಟಿ (Mandalpatti) ಪ್ರವಾಸಿ ತಾಣಕ್ಕೆ ಮಂಗಳೂರಿನಿಂದ ಆಗಮಿಸಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ.16 ರಂದು (ಮಂಗಳವಾರ) ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರು ಮಾಂದಲಪಟ್ಟಿಗೆ ಬಂದಿದ್ದ ಸಂದರ್ಭ ಯುವಕರು ಇತರ ಧರ್ಮೀಯರೆಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರೆನ್ನಲಾದ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಪ್ರವಾಸಿಗ ಯುವಕ ನಂದಾ ಕಿಶನ್, ದಾಳಿ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Next Story





