Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನಾರೋಗ್ಯ ಮಕ್ಕಳ ಚಿಕಿತ್ಸೆಗಾಗಿ ರವಿ...

ಅನಾರೋಗ್ಯ ಮಕ್ಕಳ ಚಿಕಿತ್ಸೆಗಾಗಿ ರವಿ ಕಟಪಾಡಿಯಿಂದ ವಿಶಿಷ್ಟ ವೇಷ

ವಾರ್ತಾಭಾರತಿವಾರ್ತಾಭಾರತಿ17 Aug 2022 7:22 PM IST
share
ಅನಾರೋಗ್ಯ ಮಕ್ಕಳ ಚಿಕಿತ್ಸೆಗಾಗಿ ರವಿ ಕಟಪಾಡಿಯಿಂದ ವಿಶಿಷ್ಟ ವೇಷ

ಉಡುಪಿ : ಕಳೆದ ಏಳು ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ವಿಶಿಷ್ಟ ರೀತಿಯ ವೇಷ ಧರಿಸಿ ಸಂಗ್ರಹವಾದ ಹಣ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ರವಿ ಕಟಪಾಡಿ ಈ ಬಾರಿಯೂ ಅಷ್ಟಮಿಗೆ ವೇಷ ಧರಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿ ಕಟಪಾಡಿ, ಕಳೆದ ಏಳು ವರ್ಷಗಳಿಂದ ವೇಷ ಧರಿಸಿ ಒಟ್ಟು 89.75 ಲಕ್ಷ ರೂ. ಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಿದ್ದು, ಈ ಹಣವನ್ನು ಈವರೆಗೆ ಒಟ್ಟು 66 ಅನಾ ರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸಲಾಗಿದೆ. ಈ ಬಾರಿ 10 ಲಕ್ಷ ರೂ. ಹಣ ಸಂಗ್ರಹಿಸುವ ಮೂಲಕ ಒಟ್ಟು ಒಂದು ಕೋಟಿ ರೂ. ಗುರಿ ತಲುಪುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಈ ಬಾರಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.19 ಮತ್ತು 20ರಂದು ವೇಷ ಧರಿಸಲಾಗುವುದು. ಹೈದರಬಾದ್, ಮಂಗಳೂರು, ಮಡಿಕೇರಿ, ಕಟಪಾಡಿಯ ಒಟ್ಟು ಏಳು ಮಂದಿ ಕಲಾವಿದರು ವೇಷಕ್ಕಾಗಿ ಕಳೆದ ಒಂದು ತಿಂಗಳುಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ನಾಳೆಯಿಂದ ವೇಷ ಹಾಕುವ ಪ್ರಕ್ರಿಯೆ ನಡೆಯಲಿದೆ. ವೇಷ ಧರಿಸಿ ಉಡುಪಿ, ಮಲ್ಪೆ, ಕಟಪಾಡಿ, ಉದ್ಯಾವರಗಳಿಗೆ ತೆರಳಿ ಸಾರ್ವ ಜನಿಕರಿಂದ ಹಣ ಸಂಗ್ರಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸಂಗ್ರಹವಾದ ಹಣವನ್ನು ಕಟಪಾಡಿ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ಮತ್ತು ಕೊರಗಜ್ಜ ಸನ್ನಿಧಾನದಲ್ಲಿ ಅನಾರೋಗ್ಯ ಪೀಡಿತ ಕುಂದಾಪುರ, ಕಾರ್ಕಳ, ಮುಲ್ಕಿ, ಹೆಬ್ರಿ, ಕಟಪಾಡಿ, ಕಾಪುವಿನ ಒಟ್ಟು ಆರು ಮಕ್ಕಳ ಚಿಕಿತ್ಸೆಗೆ ನೀಡಲಾ ಗುವುದು. ನಮ್ಮ ಸೇವೆಗೆ ಧನ ಸಹಾಯ ಮಾಡಲಿಚ್ಛಿಸುವವರು ಪಾಂಗಾಳ ಬ್ಯಾಂಕ್ ಆಫ್ ಬರೋಡ, ಎಸ್‌ಬಿ ಖಾತೆ ಸಂಖ್ಯೆ: 84350100001040ಗೆ ಜಮಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡದ ಪ್ರಮುಖರಾದ ಮಹೇಶ್ ಶೆಣೈ, ಅರುಣ್, ಚರಣ್ ಉಪಸ್ಥಿತರಿದ್ದರು.

ಕುಂದಾಪುರ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕಾರವಾರ ಮುಖ್ಯ ಶಾಖೆ ವತಿಯಿಂದ ಕುಂದಾಪುರ, ಗಂಗೊಳ್ಳಿ, ಬೈಂದೂರು ಹಾಗೂ ಶಿರೂರು ಶಾಖಾ ಕಚೇರಿ ಸಹಯೋಗದೊಂದಿಗೆ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಅಧೀನದ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಕಿಟ್ ವಿತರಣೆ ಮಂಗಳವಾರ ನಡೆಯಿತು.

ತಲ್ಲೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಬಿಲ್ಲವ ಮಾತನಾಡಿ, ಸೈಂಟ್ ಮಿಲಾಗ್ರಿಸ್ ಸಂಸ್ಥೆಯು ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಳ್ಳುವ ಮೂಲಕ ಮಾದರಿ ಕಾರ್ಯವನ್ನು ಕೈಗೊಂಡಿದೆ. ಅಲ್ಲದೆ ತಲ್ಲೂರಿನ ಈ ವಿಶೇಷ ಮಕ್ಕಳ ಶಾಲೆಯು ಜಿಲ್ಲೆಯಲ್ಲಿಯೇ ವಿಭಿನ್ನ ಕಾರ್ಯದ ಮೂಲಕ ವಿಶೇಷವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು.

ವಿಶೇಷ ಮಕ್ಕಳಿಗೆ ಕಿಟ್ ವಿತರಿಸಿ ಮಾತನಾಡಿದ ತಲ್ಲೂರು ಗ್ರಾ.ಪಂ. ಸದಸ್ಯೆ ಜುಡಿತ್ ಮೆಂಡೋನ್ಸಾ, ಕುಂದಾಪುರ ಸಹಿತ ವಿವಿದೆಡೆಗಳಲ್ಲಿ ಹಲವಾರು ಶಾಖೆಗಳನ್ನು ಹೊಂದಿರುವ ಈ ಸೈಂಟ್ ಮಿಲಾಗ್ರಿಸ್ ಸಂಸ್ಥೆಯು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಸಂಘದಿಂದ ಇನ್ನಷ್ಟು ಸೇವಾ ಕೈಂಕರ್ಯಗಳು ನಡೆಯಲಿ ಎಂದು ಶುಭಹಾರೈಸಿದರು.

ತಲ್ಲೂರು ಗ್ರಾ.ಪಂ. ಸದಸ್ಯ ಚಂದ್ರ ದೇವಾಡಿಗ, ನಾರಾಯಣ ವಿಶೇಷ ಮಕ್ಕಳ ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X