Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುತಿನ ಚೀಟಿಗೆ ಆಧಾರ್ ಲಿಂಕ್...

ಗುರುತಿನ ಚೀಟಿಗೆ ಆಧಾರ್ ಲಿಂಕ್ ಪ್ರಕ್ರಿಯೆಗೆ ಚುರುಕು ನೀಡಲು ದ.ಕ.ಡಿಸಿ ಡಾ.ರಾಜೇಂದ್ರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Aug 2022 8:28 PM IST
share
ಗುರುತಿನ ಚೀಟಿಗೆ ಆಧಾರ್ ಲಿಂಕ್ ಪ್ರಕ್ರಿಯೆಗೆ ಚುರುಕು ನೀಡಲು ದ.ಕ.ಡಿಸಿ ಡಾ.ರಾಜೇಂದ್ರ ಸೂಚನೆ

ಮಂಗಳೂರು : ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಸೂಚಿಸಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ವೀಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಸರಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಎಪಿಕ್ ಕಾರ್ಡ್‌ಗೆ ಆಧಾರ್ ಅಥವಾ ಅದನ್ನು ಹೊರತು ಪಡಿಸಿ ನಿಗದಿಪಡಿಸಿದ ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯ ಪಾಸ್‌ಬುಕ್, ಆರೋಗ್ಯ ವಿಮೆ, ಚಾಲನಾ ಪರವಾನಗಿ, ಪಾನ್‌ಕಾರ್ಡ್, ಎನ್‌ಪಿಆರ್‌ನಡಿ ನೀಡಲಾದ ಸ್ಮಾರ್ಟ್‌ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿ ದಾಖಲಾತಿಗಳು, ಕೇಂದ್ರ ಅಥವಾ ರಾಜ್ಯ ಸರಕಾರ ಅಥವಾ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಿದ ನೌಕರರ ಗುರುತಿನ ಚೀಟಿ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ನೀಡಿದ ಅಧಿಕೃತ ಗುರುತಿನ ಚೀಟಿ ಸಹಿತ 11 ದಾಖಲಾತಿಗಳಲ್ಲಿ ಯಾವುದಾದರು ಒಂದನ್ನು ಜೋಡಿಸಬೇಕು ಎಂದರು.

ಈ ಪ್ರಕ್ರಿಯೆಯ ಬಗ್ಗೆ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗೆ ಕಚೇರಿಗಳಲ್ಲಿ ಪ್ರಾತ್ಯಕ್ಷಿಕ ಹಮ್ಮಿಕೊಳ್ಳಬೇಕು, ಸಿಬ್ಬಂದಿಗಳ ಸಮ್ಮುಖ ಅಧಿಕಾರಿಗಳು ತಮ್ಮ ಎಪಿಕ್ ಕಾರ್ಡ್‌ಗೆ ಆಧಾರನ್ನು ಲಿಂಕ್ ಮಾಡಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗವು ಈ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

*ದ.ಕ.ಜಿಪಂ ಸಿಇಒ ಡಾ.ಕುಮಾರ್ ಮಾತನಾಡಿ ಆ.21ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಲ್ಲಾ ಬಿಎಲ್‌ಒಗಳು ಮತಗಟ್ಟೆಯಲ್ಲಿ ಹಾಜರಿದ್ದು, ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರು, ಮತಗಟ್ಟೆ ಏಜೆಂಟ್‌ರೊಂದಿಗೆ 6ಬಿ ಸಂಬಂಧಿಸಿದಂತೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಎಪಿಕ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡುವ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲು ಸೂಚಿಸಿದರು.

*ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರೆ

ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತ ಆಧಾರದ ಮೇಲೆ ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ 6ಬಿ ನಮೂನೆ ಸಲ್ಲಿಸಿ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಜೋಡಣೆ ಮಾಡಲು ಕ್ರಮ ವಹಿಸುವಂತೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ..ವಿ. ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ.

ಎಲ್ಲಾ ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೆ ಬಿಎಲ್‌ಎ (ಮತಗಟ್ಟೆ ಏಜೆಂಟ್) ನೇಮಕ ಮಾಡಬೇಕು, ಬಿಎಲ್‌ಎಗಳು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು, ಒಂದು ವೇಳೆ ಪಟ್ಟಿಯಲ್ಲಿರುವ ಮತದಾರರು ಮೃತರಾಗಿದ್ದರೆ ಅಥವಾ ವಲಸ ಹೋಗಿದ್ದರೆ ಅಂತಹವರ ಮಾಹಿತಿಯನ್ನು ಬಿಎಲ್‌ಒಗಳಿಗೆ ನೀಡಬೇಕು, 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು ಮತದಾರರ ಪಟ್ಟಿಗೆ ಸೇಪರ್ಡೆಯಾಗಿರುವ ಬಗ್ಗೆ ಪರಿಶೀಲಿಸಬೇಕು, ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಸದ್ಯಸರ ಹೆಸರು ಒಂದೇ ಕಡೆ ಬರುವಂತೆ ನೋಡಿಕೊಳ್ಳಬೇಕು, ಈ ಬಗ್ಗೆ ಸಮಸ್ಯೆಗಳಿದ್ದರೆ ರಾಜಕೀಯ ಪಕ್ಷದಿಂದ ನೇಮಕವಾಗಿರುವ ಬಿಎಲ್‌ಎಗಳು ಬೂತ್ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಸರಿಪಡಿಸಿಕೊಳ್ಳಬೇಕು. ಎಲ್ಲಾ ಬಿಎಲ್‌ಎಗಳು ತಮ್ಮ ವ್ಯಾಪ್ತಿಗೆ ಬರುವ ಅರ್ಹ ವಿಕಲಚೇತನವನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಬಗ್ಗೆ ಕ್ರಮ ವಹಿಸಬೇಕು. ಎಲ್ಲಾ ಮತದಾರರಿಗೆ ಎಪಿಕ್ ಕಾರ್ಡ್ ನೀಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತೃತೀಯ ಲಿಂಗದ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಮತಗಟ್ಟೆಗಳಿರುವ ಕಟ್ಟಡಗಳು ಶಿಥಿಲಗೊಂಡಿದ್ದರೆ ಅಥವಾ ಅಪಾಯಕಾರಿ ಹಂತದಲ್ಲಿದ್ದರೆ ಆ ಬಗ್ಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

300ಕ್ಕಿಂತ ಕಡಿಮೆ ಮತದಾರರಿರುವ ಮತಗಟ್ಟೆಗಳಿದ್ದಲ್ಲಿ ಅಂತಹ ಮತಗಟ್ಟೆಗಳನ್ನು ಹತ್ತಿರದ ಮತಗಟ್ಟೆಗೆ ವಿಲೀನ ಮಾಡುವ ಬಗ್ಗೆ ಮತ್ತು 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳಿದ್ದಲ್ಲಿ ಅಂತಹ ಮತಗಟ್ಟೆಗಳನ್ನು ವಿಭಜನೆ ಮಾಡುವ ಬಗ್ಗೆ ಪ್ರಸ್ತಾವನೆಗಳಿದ್ದಲ್ಲಿ ತಹಶೀಲ್ದಾರ್ ಮುಖಾಂತರ ವರದಿ ಸಲ್ಲಿಸುವಂತೆ ಡಿಸಿ ಹೇಳಿದರು.

ಜಿಲ್ಲೆಯ ಪ್ರತಿಯೊಂದು ಕಾಲೇಜಿನಲ್ಲೂ ಕ್ಯಾಂಪಸ್ ಅಂಬಾಸಿಡರ್ ನೇಮಕ ಮಾಡಬೇಕು. ಅವರ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಅವರ ಹಾಗೂ ಅವರ ಕುಟುಂಬದವರ ಆಧಾರ್ ಹಾಗೂ ಗುರುತಿನ ಚೀಟಿ ತರುವಂತೆ ತಿಳಿಸಿ, ಕಾಲೇಜು ಹಂತದಲ್ಲಿಯೇ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಜೋಡಣೆ ಮಾಡಿಸಲು ಕ್ರಮ ಜರಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಮತದಾರರು ವೋಟರ್ ಹೆಲ್ಪ್‌ಲೈನ್ ಆ್ಯಪ್ (Voter Helpline App) ನಲ್ಲಿ ಆನ್‌ಲೈನ್ ಮೂಲಕ 6ಬಿ ನಮೂನೆಯನ್ನು ಸಲ್ಲಿಸಿ ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಲಿಂಕ್ ಮಾಡಬಹುದಾಗಿದೆ ಎಂದು ಡಿಸಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X