ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೃತ್ಯು

ಬೈಂದೂರು, ಆ.17: ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ರೊಬ್ಬರು ಅಕಸ್ಮಿಕವಾಗಿ ಕುಸಿದು ಬಿದ್ದು ಸಮುದ್ರದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆ.17ರಂದು ಬೆಳಗ್ಗೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಹೊಸಹಿತ್ಲು ನಿವಾಸಿ ನಾರಾಯಣ(60) ಎಂದು ಗುರುತಿಸ ಲಾಗಿದೆ. ಇವರು ದೋಣಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದು, ಈ ವೇಳೆ ಕುಸಿದು ಬಿದ್ದು, ಆಕಸ್ಮಿಕವಾಗಿ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಮೇಲೆಕ್ಕೆತ್ತಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸುವ ದಾರಿ ಮಧ್ಯೆ ಇವರು ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story