ಮಂಗಳೂರು: ಚಿನ್ನ ಅಕ್ರಮ ಸಾಗಾಟ ಆರೋಪ; ಓರ್ವ ಸೆರೆ

ಬಜ್ಪೆ, ಆ.17: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ.
ಬಂಧಿತನಿಂದ 24 ಕ್ಯಾರೆಟ್ ನ 11.78 ಲಕ್ಷ ರೂ. ಮೌಲ್ಯದ 224 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಟ್ಕಳ ಮೂಲದ ಪ್ರಯಾಣಿಕ ಅಂಡಾಕಾರದ ವಸ್ತುವಿನಲ್ಲಿ ಚಿನ್ನವನ್ನು ಅಕ್ರಮವಾಗಿ ತನ್ನ ದೇಹದ ಒಳಗೆ ಒಟ್ಟುಕೊಂಡು ಸಾಗಿಸುತ್ತಿದ್ದ ವೇಳೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.
Next Story