Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಐಎಎಸ್, ಐಪಿಎಸ್ ಅಧಿಕಾರಿಗಳು ಸಲ್ಲಿಸಿರುವ...

ಐಎಎಸ್, ಐಪಿಎಸ್ ಅಧಿಕಾರಿಗಳು ಸಲ್ಲಿಸಿರುವ ಸ್ಥಿರಾಸ್ತಿ ವಿವರ; ಆರ್‌ಟಿಐ ಅಡಿಯಲ್ಲಿ ಮಾಹಿತಿ ನೀಡದ ರಾಜ್ಯ ಸರಕಾರ

ಜಿ.ಮಹಾಂತೇಶ್ಜಿ.ಮಹಾಂತೇಶ್18 Aug 2022 9:59 AM IST
share
ಐಎಎಸ್, ಐಪಿಎಸ್ ಅಧಿಕಾರಿಗಳು ಸಲ್ಲಿಸಿರುವ ಸ್ಥಿರಾಸ್ತಿ ವಿವರ; ಆರ್‌ಟಿಐ ಅಡಿಯಲ್ಲಿ ಮಾಹಿತಿ ನೀಡದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಡಿಜಿಐಜಿಪಿ ಪ್ರವೀಣ್ ಸೂದ್ ಸೇರಿದಂತೆ ರಾಜ್ಯದ ಐಎಎಸ್, ಐಪಿಎಸ್ ಅಧಿಕಾರಿಗಳು ಸಲ್ಲಿಸಿರುವ ಸ್ಥಿರಾಸ್ತಿ ವಿವರಗಳು ಕೇಂದ್ರ ಸರಕಾರದ ಅಧಿಕೃತ ಜಾಲತಾಣ ಡಿಒಪಿಟಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದರೂ ರಾಜ್ಯ ಬಿಜೆಪಿ ಸರಕಾರವು ಆರ್‌ಟಿಐ ಅಡಿಯಲ್ಲಿ ನೀಡದೇ ಮುಚ್ಚಿಟ್ಟಿರುವುದು ಇದೀಗ ಬಹಿರಂಗವಾಗಿದೆ.

 ಅಧಿಕಾರಿ ನೌಕರರ ಚರಾಸ್ತಿ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ ವಿವರಗಳು ವೈಯಕ್ತಿಕ ಮಾಹಿತಿಯಡಿಯಲ್ಲಿ ಬರುತ್ತದೆ ಎಂಬ ಕಾರಣ ನೀಡಿ ಆರ್‌ಟಿಐ  ಅಡಿಯಲ್ಲಿ  ಮಾಹಿತಿ ನೀಡಲು ನಿರಾಕರಿಸಿದೆ.   ಐಎಎಸ್, ಐಪಿಎಸ್ ಅಧಿಕಾರಿಗಳ ಆಸ್ತಿ ಹೊಣೆಗಾರಿಕೆಗಳ ಪಟ್ಟಿಯನ್ನು ಸರಕಾರ ಮುಚ್ಚಿಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

 ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಅವರು ಆರ್‌ಟಿಐ  ಅಡಿ ಅರ್ಜಿ ಸಲ್ಲಿಸಿದ್ದರು. ‘ಕೋರಿರುವ ಮಾಹಿತಿಯು ಮೂರನೇ ವ್ಯಕ್ತಿಯ ವೈಯಕ್ತಿಕ ಮಾಹಿತಿಯಾಗಿದ್ದು, ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 8(1)(ಜೆ) ಅಡಿಯಲ್ಲಿ ಮಾಹಿತಿಯನ್ನು ಒದಗಿಸಲು ಸಾಧ್ಯವಿರುವುದಿಲ್ಲ,’ ಎಂದು 2022ರ ಆಗಸ್ಟ್ 8ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಉತ್ತರ ನೀಡಿದೆ. ಇದರ ಪ್ರತಿಯು  ''the-file.in'' ಗೆ  ಲಭ್ಯವಾಗಿದೆ.

 ಆದರೆ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು ಪ್ರತಿ ವರ್ಷ ಸ್ಥಿರಾಸ್ತಿಗಳ ವಿವರಗಳನ್ನು ಕೇಂದ್ರ ಸರಕಾರಕ್ಕೆ ನೇರವಾಗಿ ಸಲ್ಲಿಸುತ್ತಿದ್ದಾರೆ. ಇದು ಡಿಒಪಿಟಿ ವೆಬ್‌ಸೈಟ್‌ನಲ್ಲಿಯೂ ಸಾರ್ವಜನಿಕರಿಗೆ ಲಭ್ಯವಿದೆ. ಹೀಗಿದ್ದರೂ ರಾಜ್ಯ ಸರಕಾರವು ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ನೀಡದೆಯೇ ಮಾಹಿತಿ ಹಕ್ಕಿನಡಿಯಲ್ಲಿ ನಿರಾಕರಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

‘ಅಖಿಲ ಭಾರತ ಆಡಳಿತ ಸೇವೆ ಮತ್ತು ಅಖಿಲ ಭಾರತ ಪೊಲೀಸ್ ಸೇವೆಯ ಅಧಿಕಾರಿಗಳು ತಮ್ಮ ಚರ ಸ್ಥಿರ ಆಸ್ತಿಯನ್ನು ಪ್ರತಿವರ್ಷ ಘೋಷಿಸಬೇಕೆಂಬ ಕಾನೂನು ನಿಯಮವಿದೆ. ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿ ಮುಖ್ಯ ನ್ಯಾಯಮೂರ್ತಿ ಪ್ರಧಾನಮಂತ್ರಿ ಮತ್ತು ಜನಪ್ರತಿನಿಧಿಗಳು ತಮ್ಮ ಚರ ಸ್ಥಿರ ಆಸ್ತಿಯನ್ನು ಸಂಬಂ ಧಪಟ್ಟವರಿಗೆ ಸಲ್ಲಿಸುತ್ತಿದ್ದಾರೆ. ಆದರೆ, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಇವರೆಲ್ಲರಿಗಿಂತ ದೇಶದ ಅತ್ಯುನ್ನತ ಹುದ್ದೆಯಲ್ಲಿದ್ದೇವೆ ಎಂಬ ಭ್ರಮೆ ಲೋಕದಲ್ಲಿದ್ದಾರೆ. ಇವರು ತೆಗೆದುಕೊಳ್ಳುತ್ತಿರುವ ಸಂಬಳ ಸಾರ್ವಜನಿಕರ ತೆರಿಗೆ ಹಣದಿಂದ ಎಂಬುದನ್ನೇ ಮರೆತುಬಿಟ್ಟಿದ್ದಾರೆ. ಲಂಚ ಪ್ರಕರಣದಿಂದ ಐಪಿಎಸ್, ಐಎಎಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದಾರೆ. ಈ ಕಾರಣಕ್ಕಾಗಿಯೇ ಭ್ರಷ್ಟಾಚಾರದಿಂದ ಮಾಡಿದ ಚರ ಸ್ಥಿರ ಆಸ್ತಿಯನ್ನು ಹಲವಾರು ಐಎಎಸ್, ಐಪಿಎಸ್ ಅಧಿಕಾರಿಗಳ ಬಹಿರಂಗಪಡಿಸುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್ ಅವರು ''ಣhe-ಜಿiಟe.iಟಿ'' ಗೆ ಪ್ರತಿಕ್ರಿಯೆ ನೀಡಿದ್ದಾರೆ.

 ಐಎಎಸ್, ಐಪಿಎಸ್ ಅಧಿಕಾರಿಗಳು ಡಿಒಪಿಟಿಗೆ ಸಲ್ಲಿಸಿರುವ ವಾರ್ಷಿಕ ಸ್ಥಿರಾಸ್ತಿ ಘೋಷಣಾ ಪತ್ರಗಳನ್ನು ''ಣhe-ಜಿiಟe.iಟಿ'' ಪರಿಶೀಲಿಸಿದೆ. ಬಹುತೇಕ ಅಧಿಕಾರಿಗಳು ಘೋಷಣೆ ಮಾಡುವ ನಮೂನೆಯಲ್ಲಿ ಏನನ್ನೂ ಮಾಹಿತಿ ಒದಗಿಸದೆಯೇ ಖಾಲಿ ನಮೂನೆಗಳನ್ನು ಸಿಬ್ಬಂದಿ ಆಡಳಿತ ತರಬೇತಿ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಅದೇ ರೀತಿ ಕಳೆದ 10 ವರ್ಷಗಳಿಂದಲೂ ಅಖಿಲಭಾರತ ಸೇವೆಯಲ್ಲಿರುವ ಹಲವು ಅಧಿಕಾರಿಗಳೂ ತಮ್ಮ ಬಳಿ ಒಂದೇ ಒಂದು ಸ್ಥಿರಾಸ್ತಿಯೂ ಇಲ್ಲ ಎಂದು ಘೋಷಿಸಿರುವುದು ಪಟ್ಟಿಯಿಂದ ಗೊತ್ತಾಗಿದೆ.

 ಆದಾಯ ತೆರಿಗೆ ಸಲ್ಲಿಸುವ ಸಂದರ್ಭದಲ್ಲೇ ಚರಾಸ್ತಿ ವಿವರಗಳನ್ನು ಘೋಷಿಸುವುದರಿಂದ ಪ್ರತ್ಯೇಕವಾಗಿ ಭಾರತ ಸರಕಾರಕ್ಕೆ ಸಲ್ಲಿಸುವ ಪ್ರಮೇಯವಿಲ್ಲ ಎಂದು ಕೆಲ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು ಕುಂಟು ನೆಪವೊಡ್ಡಿದ್ದಾರೆ.

ಸಾರ್ವಜನಿಕ ನೌಕರನು (ಆಸ್ತಿಗಳ ವಿವರಗಳ ವಾರ್ಷಿಕ ಸಲ್ಲಿಕೆ ಮತ್ತು ಮಾಹಿತಿ ಘೋಷಣೆ ಹಾಗೂ ಆಸ್ತಿಗಳ ವಿನಾಯಿತಿಯ ಮಿತಿ) 2014ರ ಪರಿಷ್ಕೃತ ನಿಯಮದ ಪ್ರಕಾರ ಅಧಿಸೂಚನೆ ಸಂಖ್ಯೆ ಜಿಎಸ್‌ಆರ್ 918(ಇ- 2014ರ ಡಿಸೆಂಬರ್ 26ರಲ್ಲಿ ಸೂಚಿಸಿರುವ ನಮೂನೆ 2 ಮತ್ತು 4 ರ ಪ್ರಕಾರ ಚರಾಸ್ತಿ, ಸಾಲ , ಹೊಣೆಗಾರಿಕೆಯ ವಿವರಗಳನ್ನು ಸಲ್ಲಿಸಬೇಕು ಇದೇ ಪತ್ರದಲ್ಲಿಯೇ ಪ್ರಸ್ತಾಪಿಸಿತ್ತು. ಅಲ್ಲದೆ ನಮೂನೆಗಳ ಮಾದರಿಗಳನ್ನೂ ಒದಗಿಸಿತ್ತು.

ಆದರೆ ಅಖಿಲ ಭಾರತ ಸೇವೆ ಅಧಿಕಾರಿಗಳು ಆರೇಳು ವರ್ಷದಿಂದಲೂ ಈ ಯಾವ ವಿವರಗಳನ್ನು ಒದಗಿಸಿಲ್ಲ ಎಂದು ತಿಳಿದು ಬಂದಿದೆ. ಹಾಗೆಯೇ  ಚರಾಸ್ತಿಗಳ ವಿವರಗಳನ್ನು ಒದಗಿಸುವ ನಮೂನೆಯನ್ನೂ ಭಾರತ ಸರಕಾರಕ್ಕೆ ಸಲ್ಲಿಸದಿರುವುದು ಗೊತ್ತಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮುಖ್ಯಮಂತ್ರಿಯ ಬಳಿಯೇ ಇದ್ದರೂ ಈ ಹಿಂದಿನ ಮೂವರು ಮುಖ್ಯಮಂತ್ರಿಗಳು ಭಾರತ ಸರಕಾರದ ಸೂಚನೆಯತ್ತ ಪರಿಗಣಿಸದೇ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ.

 ಆಸ್ತಿ ವಿವರ ಸಲ್ಲಿಸದ ಅಧಿಕಾರಿಗಳ ಭಡ್ತಿ ಮತ್ತಿತರ ವೃತ್ತಿ ಸಂಬಂಧಿ ಅಂಶಗಳನ್ನು ತಡೆಹಿಡಿಯಲು ಸರಕಾರಕ್ಕೆ ಅವಕಾಶವಿದೆ. ನಿಯಮಗಳ ಪ್ರಕಾರ, ದೇಶದ ಎಲ್ಲ ನಾಗರಿಕ ಸೇವಾ ಅಧಿಕಾರಿಗಳು ಪ್ರತಿ ವರ್ಷ ತಮ್ಮ ಸ್ಥಿರಾಸ್ತಿ ಹಾಗೂ ತಮ್ಮ ಭೋಗ್ಯದಲ್ಲಿರುವ ವಸ್ತುಗಳ ವಿವರವನ್ನು ಸರಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು.

ಅಲ್ಲದೆ ಕೈಯಲ್ಲಿರುವ ನಗದು, ಬ್ಯಾಂಕ್ ಠೇವಣಿ, ಬಾಂಡ್, ಡಿಬೆಂಚರ್, ಷೇರು, ಮ್ಯೂಚುಯಲ್ ಫಂಡ್ ಗಳಲ್ಲಿನ ಹೂಡಿಕೆ, ವಿಮೆ, ಫ್ರಾವಿಡೆಂಡ್ ಫಂಟ್, ವೈಯಕ್ತಿಕ ಸಾಲ, ಬೇರೆ ವ್ಯಕ್ತಿಗಳಿಗೆ ನೀಡಿರುವ ಸಾಲ ಮುಂತಾದ ವಿವರಗಳನ್ನು ಸಲ್ಲಿಸಬೇಕು. ಉದ್ಯೋಗಿಗಳು ಹೊಸ ನಿಯಮದಂತೆ ಹೊಂದಿರುವ ವಾಹನ ವಾಹನ ಚಿನ್ನಬೆಳ್ಳಿ ಆಭರಣಗಳು, ಗಟ್ಟಿಗಳ ವಿವರಗಳನ್ನು ಘೋಷಿಸಬೇಕು.

ಐಎಎಸ್, ಐಪಿಎಸ್ ಅಧಿಕಾರಿಗಳು ತಾವು ಹೊಂದಿದ ಚರ ಸ್ಥಿರ ಆಸ್ತಿ ಘೋಷಣೆ ಪ್ರಮಾಣ ಪತ್ರವನ್ನು ನೀಡಲು ಮಾಹಿತಿ ಹಕ್ಕು ಅಧಿನಿಯಮ 8(1) ಜೆ ಕೆಳಗಡೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂಬ ಪತ್ರವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ನೀಡಿರುವುದು ಎಲ್ಲೋ ಒಂದು ಕಡೆ ಇವರ ಭ್ರಷ್ಟ ಲಂಚತನದಿಂದ ಮಾಡಿದ ಆಸ್ತಿಗಳನ್ನು ಬಹಿರಂಗಪಡಿಸಲು ಹಿಂಜರಿಕೆ ಮಾಡುತ್ತಿದ್ದಾರೆ. ಇದರ ಹಿಂದೆ ಹಿರಿಯ ಐಎಎಸ್ ಐಪಿಎಸ್ ಅಧಿಕಾರಿಗಳು ಕೈವಾಡವಿರುವುದು ಸ್ಪಷ್ಟವಾಗಿದೆ.

-ಎಚ್.ಎಂ.ವೆಂಕಟೇಶ್, ಸಾಮಾಜಿಕ ಹೋರಾಟಗಾರ

‘ವ್ಯಾಪಕ ಭ್ರಷ್ಟಾಚಾರ ಸಾಧ್ಯತೆ’

1968ರ ಅಖಿಲ ಭಾರತ ಸೇವೆಗಳ ನಿಯಮದ ಪ್ರಕಾರ ಈ ಮೊದಲಿನಿಂದಲೂ ಚರಾಸ್ತಿಗಳ ವಿವರಗಳ ಪಟ್ಟಿಯನ್ನು ಘೋಷಿಸಬೇಕಿತ್ತು. ತದನಂತರ 2013ರಲ್ಲಿ ಜಾರಿಗೊಂಡ ಲೋಕಪಾಲ್/ಲೋಕಾಯುಕ್ತ ಕಾಯ್ದೆ ಪ್ರಕಾರ ನಿರ್ದಿಷ್ಟವಾದ ಸೂಚನೆಗಳಿದ್ದರೂ ಚರಾಸ್ತಿಗಳ ವಿವರವನ್ನು ಘೋಷಿಸದೆಯೇ ನಿಯಮ ಉಲ್ಲಂಘಿಸುವ ಮೂಲಕ ಭಾರತ ಸರಕಾರದ ಅಧಿಸೂಚನೆಯನ್ನು ಬದಿಗೆ ಸರಿಸಲಾಗುತ್ತಿದೆ. ಉನ್ನತ ಅಧಿಕಾರಿಗಳೇ ಈ ರೀತಿ ಉಲ್ಲಂಘಿಸುತ್ತಿರುವ ಹಿಂದೆ ಅವರು ಮಾಡಿರಬಹುದಾದ ಹೂಡಿಕೆಗಳು, ಷೇರುಗಳ ಖರೀದಿ ಸೇರಿದಂತೆ ಇನ್ನಿತರ ವಾಣಿಜ್ಯ/ವ್ಯವಹಾರ ಚಟುವಟಿಕೆಗಳನ್ನು ಮುಚ್ಚಿಟ್ಟಿರುವ ಹಿಂದೆ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಕೂಡ ಬಲವಾದ ಕಾರಣ ಇರಬಹುದು.

- ಆದರ್ಶ ಐಯ್ಯರ್, ಜನಾಧಿಕಾರ ಸಂಘರ್ಷ ಪರಿಷತ್‌ನ ಸಹ ಅಧ್ಯಕ್ಷ

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X