Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಬಳ್ಳಾಪುರ: ಮಕ್ಕಳಿಂದಲೇ...

ಚಿಕ್ಕಬಳ್ಳಾಪುರ: ಮಕ್ಕಳಿಂದಲೇ ನಿರ್ಲಕ್ಷ್ಯಕ್ಕೊಳಗಾದ ವೃದ್ಧ ದಂಪತಿಯ ನೆರವಿಗೆ ನಿಂತ ಉಪವಿಭಾಗಾಧಿಕಾರಿ

ಖುದ್ದು ಮನೆಗೆ ತೆರಳಿ ಆದೇಶ ಪತ್ರ ನೀಡಿದ ಎ.ಸಿ. ಸಂತೋಷ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Aug 2022 11:48 AM IST
share
ಚಿಕ್ಕಬಳ್ಳಾಪುರ: ಮಕ್ಕಳಿಂದಲೇ ನಿರ್ಲಕ್ಷ್ಯಕ್ಕೊಳಗಾದ ವೃದ್ಧ ದಂಪತಿಯ ನೆರವಿಗೆ ನಿಂತ ಉಪವಿಭಾಗಾಧಿಕಾರಿ

ಚಿಕ್ಕಬಳ್ಳಾಪುರ: ತಮ್ಮ ಪುತ್ರಿಯರಿಯರಿಂದಲೇ ನಿರ್ಲಕ್ಷ್ಯಕ್ಕೊಳಗಾಗಿದ್ದ ವೃದ್ಧ ದಂಪತಿಗೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೆರವಾಗಿದ್ದಾರೆ. 

ಇಲ್ಲಿನ ಚಿಂತಾಮಣಿ ನಗರದ ಅಝಾದ್ ಚೌಕ್ ನ 87 ವರ್ಷದ ವೆಂಕಟೇಶಾಚಾರ್, 67 ವರ್ಷದ ಪದ್ಮಾವತಮ್ಮ ತಮ್ಮ ಮೂವರು ಪುತ್ರಿಯರಿಗೆ ಸುಮಾರು ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನು ದಾನವಾಗಿ ನೀಡಿದ್ದರು. ಆದರೆ, ಮಕ್ಕಳು ಯೋಗಕ್ಷೇಮ ವಿಚಾರಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾಗ  ನೊಂದ ದಂಪತಿ ನ್ಯಾಯಕ್ಕಾಗಿ ಕಂದಾಯ ಅಧಿಕಾರಿಗಳ ಮೊರೆ ಹೋಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಚಿಕ್ಕಬಳ್ಳಾಪುರ ಎಸಿ ಡಾ.ಜಿ.ಸಂತೋಷ್ ಕುಮಾರ್,  ಹಿರಿಯ ನಾಗರಿಕ ಪೋಷಣೆ ಮತ್ತು ಶ್ರೇಯೋಭಿವೃದ್ದಿ ಹಾಗೂ ಸಂರಕ್ಷಣೆ ಕಾಯ್ದೆ (2007)ರಡಿ ಜೀವನ ನಿರ್ವಹಣೆ ಕಲಂ 23 ರ ಪ್ರಕಾರ ಮಕ್ಕಳಿಗೆ ಮಾಡಿದ್ದ ದಾನ ಪತ್ರವನ್ನ ರದ್ದುಪಡಿಸಿ, ಪೋಷಕರಿಗೆ ಮಕ್ಕಳು ಮಾಸಿಕ ತಲಾ 7 ಸಾವಿರ ನೀಡುವಂತೆ ಆದೇಶಸಿದ್ದಾರೆ. ಜೊತೆಗೆ ಪೋಷಕರಿಗೆ ಕಿರುಕುಳ ನೀಡದೇ ನೆಮ್ಮದಿಯ ಬದುಕು ರೂಪಿಸುವಂತೆಯೂ ಆದೇಶಿಸಿದ್ದಾರೆ.

ಸ್ವಾತಂತ್ರ್ಯ ದಿನದಂದೇ ಮನೆಗೆ ತೆರಳಿ ಆದೇಶ ಪತ್ರ ನೀಡಿದ ಎ.ಸಿ. :  ಚಿಂತಾಮಣಿ ನಗರದ ಅಝಾದ್ ಚೌಕ್ ನಲ್ಲಿರುವ ವೃದ್ಧ ದಂಪತಿಯ ಮನೆಗೆ ತೆರಳಿದ ಎ.ಸಿ. ಸಂತೋಷ್ ಕುಮಾರ್ ಹಾಗೂ ಅವರ ಪತ್ನಿ, ಪರಿಶಿಷ್ಟ ವರ್ಗಗಳ ಅಧಿಕಾರಿ ಆದೇಶ ಪತ್ರ ನೀಡಿ ವೃದ್ಧ ದಂಪತಿಗೆ ಭರವಸೆ ನೀಡಿದ್ದಾರೆ. 

ಅಧಿಕಾರಿಯ ಸಾಮಾಜಿಕ ಕಳಕಳಿ, ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. 

-------------------------------------------

ಮಕ್ಕಳಿಗೆ ಮಾಡಿದ್ದ ದಾನಪತ್ರವನ್ನು ರದ್ದು ಮಾಡಿಕೊಡುವಂತೆ ವೃದ್ಧ ದಂಪತಿ ಕಳೆದ ವರ್ಷ ಅರ್ಕಿ ಸಲ್ಲಿಸಿದ್ದರು. ಅಲ್ಲದೇ ಮಕ್ಕಳಿಂದ ಅನುಭವಿಸುತ್ತಿರುವ ನೋವನ್ನೂ ಈ ಹಿಂದೆ ಪತ್ರಿಕೆಗಳಿಗೆ ಹೇಳಿಕೆ ನೀಡುವ ಮೂಲಕ ತೋಡಿಕೊಂಡಿದ್ದರು. ಇದನ್ನು ಗಮನಿಸಿ ದಾಖಲೆಗಳ ಅನುಸಾರ ಕಾನೂನು ಬದ್ಧವಾಗಿ ನೊಂದ ದಂಪತಿ ಪರವಾಗಿ ಸ್ವಾತಂತ್ರ್ಯ ದಿನದಂದೇ ಅವರ ಮನೆಗೆ ತೆರಳಿ ಆದೇಶ ಪತ್ರ ನೀಡಿ, ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿರ್ವಹಿಸಿದ್ದೇನೆ ಉಪವಿಭಾಗಾಧಿಕಾರಿ

-ಡಾ.ಜಿ. ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ

-----------------------------------------------

''ಬೆಂಗಳೂರು ಕಂದಾಯ ವಿಭಾಗದಲ್ಲೇ ಚಿಕ್ಕಬಳ್ಳಾಪುರ ವಿಭಾಗಕ್ಕೆ ಪ್ರಥಮ ಸ್ಥಾನ''

'ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿನ ಪ್ರಕರಣಗಳ ವಿಲೇವಾರಿ ವಿಚಾರದಲ್ಲಿ ಚಿಕ್ಕಬಳ್ಳಾಪುರ ವಿಭಾಗಾಧಿಕಾರಿ ನ್ಯಾಯಾಲಯವು ಬೆಂಗಳೂರು ಕಂದಾಯ ವಿಭಾಗದಲ್ಲೇ ಪ್ರಥಮ ಸ್ಥಾನದಲ್ಲಿದೆ. ಜನವರಿಯಲ್ಲಿ 5,700 ಪ್ರಕರಣಗಳು ಇದ್ದವು. ಈಗ 4,222 ಪ್ರಕರಣಗಳಿವೆ. 

- ಡಾ.ಜಿ. ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ

ಇದನ್ನೂ ಓದಿ:  ಮಡಿಕೇರಿ | ತಲ್ತರೆಶೆಟ್ಟಳ್ಳಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ: ಆರೋಪ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X