Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಅಬತರ' ತುಳು ಸಿನಿಮಾ ಬಿಡುಗಡೆ

'ಅಬತರ' ತುಳು ಸಿನಿಮಾ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ18 Aug 2022 6:56 PM IST
share
ಅಬತರ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್ ನಡಿಯಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ "ಅಬತರ" ತುಳು ಸಿನಿಮಾ ಗುರುವಾರ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿದರು.

"ತುಳು ರಂಗಭೂಮಿ ಇಂದು ಬಹಳಷ್ಟು ಬೆಳೆದಿದೆ. ರಂಗಭೂಮಿಯ ಕಲಾವಿದರು ಅಭಿನಯಿಸುವ ತುಳು ಚಿತ್ರಗಳು ಇಂದು ಹಿಟ್ ಮೇಲೆ ಹಿಟ್ ಆಗುತ್ತಿವೆ. ತುಳು ಸಿನಿಮಾಗಳ ಪರ್ವಕಾಲ ಇದಾಗಿದ್ದು ಪ್ರತಿಯೊಬ್ಬರೂ ಚಿತ್ರ ನೋಡಿ ಬೆಂಬಲ ನೀಡುತ್ತಿರುವುದು ಖುಷಿಯ ವಿಚಾರ. ಅಬತರ ಸಿನಿಮಾ ತುಳುನಾಡು ಮಾತ್ರವಲ್ಲದೆ ದೇಶ ವಿದೇಶಗಳಲ್ಲಿಯೂ ಯಶಸ್ಸು ಕಾಣಲಿ. ಎಲ್ಲರೂ ಸಿನಿಮಾ ನೋಡಿ ಇಡೀ ಚಿತ್ರ ತಂಡವನ್ನು ಪ್ರೋತ್ಸಾಹಿಸಬೇಕು" ಎಂದರು.

ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್ ಅವರು, "ಅಬತರ ಸಿನಿಮಾ ತುಂಬಾ ಇಷ್ಟಪಟ್ಟು ಮಾಡಿದ್ದೇವೆ. ಇಂದಿನವರೆಗೆ ನಾವು ಮಾತನಾಡಿದ್ದೇವೆ ಇನ್ನು ಮುಂದೆ ತುಳುವರಿಗೆ ನೀಡಿರುವ ನಮ್ಮ ಸಿನಿಮಾ ಮಾತಾಡಬೇಕು. ಮೊದಲ ಶೋ ಅನ್ನು ದೇವರ ಸ್ವರೂಪವಾದ ಮಕ್ಕಳಿಗೆ ತೋರಿಸಿದ್ದೇವೆ. ಅವರ ಖುಷಿಯಲ್ಲಿ ಪಾಲು ಪಡೆದಿರುವುದು ನಮಗೆ ಹೆಮ್ಮೆಯ ವಿಷಯ" ಎಂದರು.

ಬಳಿಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಅರ್ಜುನ್ ಕಾಪಿಕಾಡ್, ದೇವದಾಸ್ ಕಾಪಿಕಾಡ್ ಗರಡಿಯಲ್ಲಿ ಪಳಗಿದವರು. ಸಿನಿಮಾರಂಗದ ಬಗ್ಗೆ ಅವರಿಗೆ ಅನುಭವ ಇದೆ. ಸಿನಿಮಾ ಯಶಸ್ವಿಯಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಸಿನಿಮಾದಲ್ಲಿ ಮನರಂಜನೆ ಇದೆ. ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಮೂಡಿ ಬಂದಿದೆ. ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದರು. ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್ ಚಿತ್ರದ ಬಗ್ಗೆ ಮಾತಾಡಿದರು. 

ವೇದಿಕೆಯಲ್ಲಿ ಲಕ್ಷ್ಮೀಶ್ ಭಂಡಾರಿ, ಕಾರ್ಪೋರೇಟರ್ ಕಿರಣ್ ಕೋಡಿಕಲ್, ಕಿಶೋರ್ ಕೊಟ್ಟಾರಿ, ರಾಕೇಶ್, ಸಾಯಿಕೃಷ್ಣ, ಆರ್ ಧನರಾಜ್, ಪ್ರಮೋದ್ ಬಲ್ಲಾಳ್ ಬಾಗ್, ಸುರೇಶ್ಚಂದ್ರ ಶೆಟ್ಟಿ,  ಶೇಖರ ಶೆಟ್ಟಿ, ಅನಿಲ್ ಸಾಲಿಯಾನ್, ನಿಖಿಲ್ ಸಾಲ್ಯಾನ್, ವೀರಾಜ್ ಅತ್ತಾವರ, ಆನಂದ್ ಬಂಗೇರ, ದಿನೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಸುರೇಂದ್ರ ಬಂಗೇರ, ರಕ್ಷಿತ್ ಕೊಟ್ಟಾರಿ, ಗಿರೀಶ್ ಎಂ  ಶೆಟ್ಟಿ ಕಟೀಲು , ಪ್ರಕಾಶ್ ಶೆಟ್ಟಿ ಧರ್ಮನಗರ, ಮೋಹನ್ ಕೊಪ್ಪಳ,  ಜಗನ್ನಾಥ ಶೆಟ್ಟಿ ಬಾಳ,  ಅರ್ಜುನ್ ಕಾಪಿಕಾಡ್, ಶರ್ಮಿಳಾ ಡಿ ಕಾಪಿಕಾಡ್, ಗಾನ ಭಟ್ ಅನೂಪ್ ಸಾಗರ್, ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.
ಲಕ್ಷ್ಮೀಶ್ ಮಂಗಳೂರು ನಲ್ಲಿ ನಿರೂಪಿಸಿದರು.

ಅಬತರ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನಿಪೊಲಿಸ್, ಪಿವಿಆರ್, ಮೂಡಬಿದ್ರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್ ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್,  ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ,  ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಂಡಿದೆ. ಒಟ್ಟು 15 ಚಿತ್ರ ಮಂದಿರಗಳಲ್ಲಿ ಸಿನಿಮಾ ಏಕ ಕಾಲಕ್ಕೆ ತೆರೆ ಕಂಡಿದೆ.

ಅಬತರ ಹಾಸ್ಯ ಸಿನಿಮಾದ ಕತೆಯನ್ನು ಡಾ ದೇವದಾಸ್ ಕಾಪಿಕಾಡ್ ರಚಿಸಿ, ಅಭಿನಯಿಸಿ ತುಳುನಾಡ ಆ್ಯಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಅಭಿನಯದ ಜೊತೆಗೆ ಮೊಟ್ಟ ಮೊದಲ ಬಾರಿಗೆ ನಿರ್ದೇಶನ‌ ಮಾಡಿದ್ದಾರೆ.

ತಾರಾಗಣದಲ್ಲಿ  ನವೀನ್ ಡಿ ಪಡಿಲ್,  ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿ ಕೃಷ್ಣ,  ಶನಿಲ್ ಗುರು, ಚೇತನ್ ರೈ ಮಾಣಿ, ಲಕ್ಷ್ಮೀಶ್, ಸುನಿಲ್ ಚಿತ್ರಾಪುರ ಮತ್ತು ನಾಯಕನಟಿಯಾಗಿ ಗಾನ ಭಟ್, ಕ್ರಿಸ್ಟಿನಾ ನಟಿಸಿದ್ದಾರೆ.  

ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್, ಜೇಕೋಬ್,  ಕಾರ್ಯಕಾರಿ ನಿರ್ಮಾಪಕರಾಗಿ ಸಂದೀಪ್ ಶೆಟ್ಟಿ ಕೆಲಸ ಮಾಡಿದ್ದಾರೆ. ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು, ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X