Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪರಾಧಿಗಳನ್ನು ಬಿಡುಗಡೆ ಮಾಡಿದ...

ಅಪರಾಧಿಗಳನ್ನು ಬಿಡುಗಡೆ ಮಾಡಿದ ಸಮಿತಿಯಲ್ಲಿ ಬಿಜೆಪಿ ಶಾಸಕರು, ಗೋಧ್ರಾ ಘಟನೆಯ ಅಪ್ರಾಮಾಣಿಕ ಸಾಕ್ಷಿಗಳಿದ್ದರು: ವರದಿ‌

ಬಿಲ್ಕಿಸ್ ಬಾನು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ18 Aug 2022 9:49 PM IST
share
ಅಪರಾಧಿಗಳನ್ನು ಬಿಡುಗಡೆ ಮಾಡಿದ ಸಮಿತಿಯಲ್ಲಿ ಬಿಜೆಪಿ ಶಾಸಕರು, ಗೋಧ್ರಾ ಘಟನೆಯ ಅಪ್ರಾಮಾಣಿಕ ಸಾಕ್ಷಿಗಳಿದ್ದರು: ವರದಿ‌

ಹೊಸದಿಲ್ಲಿ,ಆ.18: ಇಬ್ಬರು ಬಿಜೆಪಿ ಶಾಸಕರು 2002ರ ಗುಜರಾತ್ ದಂಗೆಗಳಲ್ಲಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ್ದ 11 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಲು ಶಿಫಾರಸು ಮಾಡಿದ್ದ ಸಮಿತಿಯ ಸದಸ್ಯರಾಗಿದ್ದರು ಎಂದು ಆಂಗ್ಲ ಮಾಧ್ಯಮವೊಂದು ಗುರುವಾರ ವರದಿ ಮಾಡಿದೆ.

"ಇಂತಹ ದೊಡ್ಡ ಮತ್ತು ಅನ್ಯಾಯದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ತನ್ನ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಯಾರೂ ವಿಚಾರಿಸಿರಲಿಲ್ಲ" ಎಂದು ಬಾನು ಆ.17ರಂದು ಹೇಳಿಕೆಯೊಂದರಲ್ಲಿ ತಿಳಿಸಿದ್ದರು. ಬಿಜೆಪಿ ಶಾಸಕರಾದ ಸಿ.ಕೆ.ರಾವಲಜಿ ಮತ್ತು ಸುಮನ ಚೌಹಾಣ ಅವರು ಅಪರಾಧಿಗಳ ಶಿಕ್ಷೆಯನ್ನು ಮನ್ನಾಗೊಳಿಸಲು ಶಿಫಾರಸು ಮಾಡುವ ಸರ್ವಾನುಮತದ ನಿರ್ಧಾರವನ್ನು ಕೈಗೊಂಡಿದ್ದ ಗೋಧ್ರಾ ಜಿಲ್ಲಾಧಿಕಾರಿ ಸುಜಲ್ ಮಯತ್ರಾ ನೇತೃತ್ವದ ಸಮಿತಿಯ ಭಾಗವಾಗಿದ್ದರು.

ಸಮಿತಿಯ ಇತರ ಇಬ್ಬರು ಸದಸ್ಯರು ಸಹ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಹಾಗೂ ಮಾಜಿ ಬಿಜೆಪಿ ಗೋಧ್ರಾ ಮುನ್ಸಿಪಲ್ ಕೌನ್ಸಿಲರ್ ಮುರಳಿ ಮೂಲಚಂದಾನಿ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆ ಸ್ನೇಹಾಬೆನ್ ಭಾಟಿಯಾ ಈ ಇಬ್ಬರು ಸದಸ್ಯರಾಗಿದ್ದಾರೆ.

ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಮೂಲಚಂದಾನಿಯನ್ನು ಪ್ರತ್ಯಕ್ಷದರ್ಶಿ ಸಾಕ್ಷಿಯನ್ನಾಗಿ ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು. ಈ ಘಟನೆಯಲ್ಲಿ ಅಯೋಧ್ಯೆಯಿಂದ ಮರಳುತ್ತಿದ್ದ 59 ಯಾತ್ರಿಗಳು ಸಜೀವ ದಹನಗೊಂಡಿದ್ದರು.

ಖಾಸಗಿ ಮಾಧ್ಯಮ ಸಂಸ್ಥೆಯೊಂದು ನಡೆಸಿದ್ದ ಕುಟುಕು ಕಾರ್ಯಾಚರಣೆಯು ಪ್ರತ್ಯಕ್ಷದರ್ಶಿ ಸಾಕ್ಷಿಗಳಾದ ಮೂಲಚಂದಾನಿ, ನಿತಿನ್ ಪಾಠಕ್ ಮತ್ತು ರಂಜಿತ್ ಜೋಧಾ ಅವರು ತಮ್ಮ ಮೂಲಹೇಳಿಕೆಗೆ ವಿರುದ್ಧವಾದ ಹೇಳಿಕೆಗಳನ್ನು ನೀಡಿದ್ದರು ಎನ್ನುವುದನ್ನು ತೋರಿಸಿತ್ತು.

ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ವಿಶೇಷ ತ್ವರಿತ ನ್ಯಾಯಾಲಯವು ಇದನ್ನು ಒಪ್ಪಿಕೊಂಡಿರದಿದ್ದರೂ ಖುದ್ದು ನ್ಯಾಯಾಧೀಶರೇ ಸ್ಪಷ್ಟ ಅಸಂಗತತೆಗಳ ಆಧಾರದಲ್ಲಿ ‘‘ಮೂಲಚಂದಾನಿ ಮತ್ತು ಇತರ ಇಬ್ಬರು ತಥಾಕಥಿತ ಸಾಕ್ಷಿಗಳನ್ನು ‘ಸತ್ಯದ ಪ್ರತ್ಯಕ್ಷದರ್ಶಿಗಳು’ ಎಂದು ಬಣ್ಣಿಸಲು ಸಾಧ್ಯವಿಲ್ಲ ಮತ್ತು ಅವರ ಸಾಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಬೇರೆ ಆಯ್ಕೆಯಿಲ್ಲ ’’ಎಂದು ತೀರ್ಮಾನಿಸಿದ್ದರು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ,ಓರ್ವ ಸೆಷನ್ಸ್ ನ್ಯಾಯಾಧೀಶರು ಮತ್ತು ಜೈಲು ಅಧೀಕ್ಷಕರೂ ಸಮಿತಿಯಲ್ಲಿದ್ದರು.

ಗುಜರಾತ್ ಸರಕಾರವು ಈ ಸಮಿತಿಯ ಶಿಫಾರಸನ್ನು ಒಪ್ಪಿಕೊಂಡ ಬಳಿಕ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿತ್ತು ಮತ್ತು ವಿಹಿಂಪ ಮತ್ತು ಆರೆಸ್ಸೆಸ್ ಅವರಿಗೆ ಭವ್ಯ ಸ್ವಾಗತವನ್ನು ನೀಡಿದ್ದವು.‘ಅಪರಾಧಿಗಳು ಈಗಾಗಲೇ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ ಮತ್ತು ಅವರನ್ನು ಅವಧಿಗೆ ಮುನ್ನವೇ ಬಿಡುಗಡೆಗೊಳಿಸಬೇಕು ಎಂದು ನಾವು ಭಾವಿಸಿದ್ದೆವು ’ ಸಮಿತಿಯ ಸದಸ್ಯರೋರ್ವರು ಮಾಧ್ಯಮಕ್ಕೆ ತಿಳಿಸಿದರು.

 ಎಷ್ಟು ಸಭೆಗಳನ್ನು ನಡೆಸಲಾಗಿತ್ತು ಮತ್ತು ನಿರ್ಧಾರವನ್ನು ತೆಗೆದುಕೊಳ್ಳುವಾಗ ಯಾವ ಅಂಶಗಳನ್ನು ಪರಿಶೀಲಿಸಲಾಗಿತ್ತು ಎನ್ನುವುದನ್ನು ತಿಳಿಸಲು ಅವರು ನಿರಾಕರಿಸಿದರು.

 ಸಮಿತಿಯು ಕಾರ್ಯವಿಧಾನವನ್ನು ಅನುಸರಿಸಿದೆ ಮತ್ತು ನಿಯಮಗಳನ್ನು ಪಾಲಿಸಿದೆ ಎಂದು ಗೋದ್ರಾ ಶಾಸಕ ರಾವಲ್ಜಿ ತಿಳಿಸಿದರು. ಸುಮನ್ ಚೌಹಾಣ್ ಗೋಧ್ರಾ ಜಿಲ್ಲೆಯ ಕಲೋಲ್ನಿಂದ ಮೊದಲ ಬಾರಿಗೆ ಶಾಸಕಿಯಾಗಿದ್ದಾರೆ.

  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ)ವು ನರೇಂದ್ರ ಮೋದಿ ನೇತೃತ್ವದ ಆಗಿನ ಗುಜರಾತ್ ಸರಕಾರದ ವಿರುದ್ಧ ನಡೆಸಿದ್ದ ಸುದೀರ್ಘ ಕಾನೂನು ಸಮರದ ಬಳಿಕ ಈಗ ಬಿಡುಗಡೆಗೊಂಡಿರುವ ವ್ಯಕ್ತಿಗಳನ್ನು ಅಪರಾಧಿಗಳೆಂದು ನ್ಯಾಯಾಲಯವು ಘೋಷಿಸಿತ್ತು. ಗುಜರಾತ್ ಪೊಲೀಸ್ ಮತ್ತು ಆಡಳಿತ ಅಪರಾಧವನ್ನು ಮುಚ್ಚಿಹಾಕುವ ಉದ್ದೇಶವನ್ನು ಹೊಂದಿದ್ದವು ಮತ್ತು ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದ್ದವು ಎಂಬ ಎನ್ಎಚ್ಆರ್ಸಿಯ ವಾದವನ್ನು ಸರ್ವೋಚ್ಚ ನ್ಯಾಯಾಲಯವು ಪುರಸ್ಕರಿಸಿತ್ತು. ‌

ಮೋದಿ ಸರಕಾರವು ಗುಜರಾತಿನಲ್ಲಿ ಮುಕ್ತ ಮತ್ತು ನ್ಯಾಯಯುತ ಪ್ರಕ್ರಿಯೆಗಳನ್ನು ಖಚಿತಪಡಿಸುತ್ತದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲವೆಂದು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿದಿದ್ದರಿಂದ ಪ್ರಕರಣದ ವಿಚಾರಣೆಯನ್ನು ಸಹ ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಗಿತ್ತು.

11 ಅಪರಾಧಿಗಳ ಬಿಡುಗಡೆಯ ತನ್ನ ಆದೇಶದಲ್ಲಿ ಗುಜರಾತ್ ಸರಕಾರವು ಅವರನ್ನು ಅಪರಾಧಿಗಳೆಂದು ಘೋಷಿಸಲಾಗಿದ್ದ ಸಂದರ್ಭದಲ್ಲಿ ಜಾರಿಯಲ್ಲಿದ್ದ ರಾಜ್ಯದ 1992ರ ಕ್ಷಮಾದಾನ ನೀತಿಯಡಿ ತನ್ನ ವಿವೇಚನಾಧಿಕಾರವನ್ನು ಬಳಸಿದ್ದೇನೆ ಎಂದು ಹೇಳಿದೆ. ಈ ನೀತಿಯಡಿ ಕನಿಷ್ಠ 14 ವರ್ಷಗಳ ಶಿಕ್ಷೆಯನ್ನು ಅನುಭವಿಸಿರುವ ಯಾವುದೇ ವರ್ಗದ ಅಪರಾಧಿಗಳು ಬಿಡುಗಡೆಗೊಳ್ಳುವ ಅರ್ಹತೆಯನ್ನು ಹೊಂದಿದ್ದಾರೆ. ಇದನ್ನು ಕಾನೂನು ವಿಶ್ಲೇಷಕರು ಪ್ರಶ್ನಿಸಿದ್ದಾರೆ.

‌ಸಿಆರ್ಪಿಸಿಯ ಕಲಂ 432 ಮತ್ತು 433ರಡಿ ರಾಜ್ಯಸರಕಾರಗಳು ಕ್ಷಮಾದಾನದ ಅಧಿಕಾರವನ್ನು ಚಲಾಯಿಸುತ್ತವೆ. ಆದಾಗ್ಯೂ ಸಿಬಿಐನಂತಹ ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸಿದ ಪ್ರಕರಣಗಳಲ್ಲಿ ಅವಧಿಪೂರ್ವ ಬಿಡುಗಡೆಗೆ ಕೇಂದ್ರ ಸರಕಾರದ ಒಪ್ಪಿಗೆಯು ಅಗತ್ಯವಾಗಿದೆ ಎಂದು ಸಿಆರ್ಪಿಸಿಯ ಕಲಂ 435 ಸ್ಪಷ್ಟವಾಗಿ ಹೇಳಿದೆ. ಇದನ್ನು ದಿಲ್ಲಿ ಉಚ್ಚ ನ್ಯಾಯಾಲಯವೂ ತನ್ನ 2021ರ ತೀರ್ಪಿನಲ್ಲಿ ಎತ್ತಿಹಿಡಿದಿದೆ.

ಈ ಪ್ರಕರಣದಲ್ಲಿ ಗುಜರಾತ್ ಸರಕಾರದ ಶಿಫಾರಸಿಗೆ ಕೇಂದ್ರ ಸರಕಾರವು ಒಪ್ಪಿಗೆ ನೀಡಿದ್ದರೆ ಅದರ ನಿರ್ಧಾರವು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವವರು ಮತ್ತು ಅತ್ಯಾಚಾರದ ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆಗೊಳಿಸಲು ಅವಕಾಶವಿಲ್ಲದ ಅದರದೇ ಸ್ಥಾಪಿತ ನೀತಿಗೆ ವಿರುದ್ಧವಾಗುತ್ತದೆ.

‌ಗುಜರಾತ್ ಸರಕಾರದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X